ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಪಾಂಡೇಶ್ವರ ಇವರ ಜಂಟಿ ಆಶ್ರಯದಲ್ಲಿ 110ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 26 ಜುಲೈ 2025ರಂದು ಪೂರ್ವಾಹ್ನ 11-00 ಗಂಟೆಗೆ ಮಂಗಳೂರಿನ ಪಾಂಡೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪಾಂಡೇಶ್ವರ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಎಚ್.ಕೆ. ಶಾಲಿನಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಶಿಕ್ಷಕಿ ಶ್ರೀಮತಿ ರೇಖಾ ಸುದೇಶ್ ರಾವ್ ಮಂಗಳಾದೇವಿ ಮತ್ತು ನಿವೃತ್ತ ಪ್ರಶಸ್ತಿ ವಿಜೇತ ಶಿಕ್ಷಕಿ ಶ್ರೀಮತಿ ಸುಧಾ ನಾಗೇಶ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.