ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಕದ್ರಿ ಮಂಗಳೂರು ಜಂಟಿ ಆಶ್ರಯದಲ್ಲಿ 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ದಿನಾಂಕ 9 ಆಗಸ್ಟ್ 2025ರ ಶನಿವಾರ ಮಹರ್ಷಿ ವಾಲ್ಮೀಕಿ ಸಭಾಂಗಣದಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.
ಸಾಹಿತ್ಯ ಅಭಿರುಚಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನೀತಾ ವಹಿಸಲಿದ್ದು, ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಕರಾವಳಿ ಡೈಲಿ ನ್ಯೂಸ್ ಇದರ ಚೀಪ್ ಎಡಿಟರ್ ಆಗಿರುವ ಮಹೇಶ್ ಕನ್ನೇಶ್ವರ, ಹಿರಿಯ ಬರಹಗಾರರಾದ ಸುಬ್ರಾಯ ಭಟ್, ದೂರದರ್ಶನ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರರಾದ ರಾಜೇಶ್ ದಡ್ಡಂಗಡಿ, ಲೇಖಕಿ ನಿರ್ಮಲ ಉದಯಕುಮಾರ್ ಭಾಗವಹಿಸಲಿರುವರು. ಕಾರ್ಯಕ್ರಮದ ನಿರೂಪಣೆಯನ್ನು ಸುರೇಖಾ ಯಾಳವಾರ ಮಾಡಲಿರುವರು ಎಂದು ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ತಿಳಿಸಿದ್ದಾರೆ.

