ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಇವರ ಜಂಟಿ ಆಶ್ರಯದಲ್ಲಿ 116ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 30 ಡಿಸೆಂಬರ್ 2025ರಂದು ಅಪರಾಹ್ನ 02-30 ಗಂಟೆಗೆ ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಬಲ್ಮಠ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವನಿತಾ ದೇವಾಡಿಗ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಮತ್ತು ಲೇಖಕರಾದ ಪ್ರೊ. ಕೃಷ್ಣಮೂರ್ತಿ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು. ಲೇಖಕಿ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳ ಶೆಟ್ಟಿ ಇವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

