ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜ್ ಇವರ ಜಂಟಿ ಆಶ್ರಯದಲ್ಲಿ 117ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 05 ಮಾರ್ಚ್ 2026ರಂದು ಬೆಳಿಗ್ಗೆ 11-30 ಗಂಟೆಗೆ ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರುತಿ ಶೆಟ್ಟಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್ ಮತ್ತು ಹಿರಿಯ ವರದಿಗಾರರಾದ ವಿಜಯ ಕೋಟ್ಯಾನ್ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು. ಹಿರಿಯ ಸಾಹಿತಿ ಡಾ. ಪ್ರಭಾಕರ ನೀರುಮಾರ್ಗ, ತುಳು ಪರಿಷತ್ ಅಧ್ಯಕ್ಷರಾದ ಶುಭೋದಯ ಆಳ್ವ ಮತ್ತು ಲೇಖಕಿ ಶ್ರೀಮತಿ ಸುಧಾ ನಾಗೇಶ್ ಇವರುಗಳ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

