ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ದಿನಾಂಕ 05 ಮಾರ್ಚ್ 2026ರಂದು ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜ್ ಮಂಗಳೂರು ಇದರ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಸಹ ಪ್ರಾಧ್ಯಾಪಕರು ಔಷಧ ಶಾಸ್ತ್ರ ವಿಭಾಗ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರ ಮಂಗಳೂರಿನ ಡಾ. ಚಂದ್ರಶೇಖರ್ ಹಾಗೂ ಹಿರಿಯ ವರದಿಗಾರರು ವಿಜಯ ಕರ್ನಾಟಕ ದೈನಿಕ ಪತ್ರಿಕೆಯ ವಿಜಯ ಕೋಟ್ಯಾನ್ ಭಾಗವಹಿದ್ದರು. ಹಿರಿಯ ಸಾಹಿತಿ ಕಾದಂಬರಿಗಾರರಾದ ಡಾ. ಪ್ರಭಾಕರ ನೀರುಮಾರ್ಗ ಹಾಗೂ ತುಳು ಪರಿಷತ್ ಮಂಗಳೂರು ಅಧ್ಯಕ್ಷರಾದ ಶುಭೋದಯ ಆಳ್ವ ಇವರು ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಲೇಖಕಿ ಸುಧಾ ನಾಗೇಶ್ ಕಾರ್ಯಕ್ರಮ ನಿರೂಪಿಸಿ, ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿ, ಮನ್ವಿತ್ ಶೆಟ್ಟಿ ವಂದಿಸಿದರು.
