ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇವರ ಜಂಟಿ ಆಶ್ರಯದಲ್ಲಿ 119ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 27 ಜೂನ್ 2026ರಂದು ಪೂರ್ವಾಹ್ನ ಗಂಟೆ 11-00ಕ್ಕೆ ಮಣ್ಣಗುಡ್ಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣ್ಣಗುಡ್ಡ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಇವರು ವಹಿಸಲಿದ್ದು, ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಹಿರಿಯ ಬರಹಗಾರರಾದ ಯನ್. ಸುಬ್ರಾಯ ಭಟ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಚಂದ್ರ ಶೆಟ್ಟಿ ಇವರುಗಳು ಭಾಗವಹಿಸುವರು. ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸುವರು ಎಂದು ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ತಿಳಿಸಿದ್ದಾರೆ.

