Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ‘ನಟರಾಜ್ಯೋತ್ಸವ’ ನೃತ್ಯ ಪ್ರಸ್ತುತಿ | ನವೆಂಬರ್ 29

    November 28, 2026

    ಅಲೋಶಿಯಸ್ ಕಾಲೇಜಿನಲ್ಲಿ ‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ 2026’ | ನವೆಂಬರ್ 30

    November 28, 2026

    ಯಕ್ಷಾಂಗಣ ತಾಳಮದ್ದಳೆ ಸಪ್ತಾಹದಲ್ಲಿ ವಿದ್ವಾನ್ ಕಾಂತ ರೈ ಸಂಸ್ಮರಣೆ – ತುಳು ತಾಳಮದ್ದಳೆ

    November 28, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಅಮೃತ ಪ್ರಕಾಶ ಪತ್ರಿಕೆಯ 123ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ
    Literature

    ಅಮೃತ ಪ್ರಕಾಶ ಪತ್ರಿಕೆಯ 123ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    November 28, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ಅಶೋಕನಗರ ಆಂಗ್ಲ ಮಾಧ್ಯಮ ಶಾಲೆ ಜಂಟಿ ಆಶ್ರಯದಲ್ಲಿ 123ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವು ಅಶೋಕನಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 28 ನವೆಂಬರ್ 2026ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶೋಕನಗರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿಣಿ ಶ್ರೀಮತಿ ಪೂರ್ಣಿಮಾ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ತುಳು ಕನ್ನಡ ಬರಹಗಾರ್ತಿ ರೂಪಕಲಾ ಆಳ್ವ ಅವರು ಮಾತನಾಡುತ್ತಾ “ಸಾಹಿತ್ಯ ನಮಗೆ ಸಂತೋಷವನ್ನು ನೀಡುತ್ತದೆ. ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹಿರಿಯ ಸಾಹಿತಿ ಎನ್. ಸುಬ್ರಾಯ ಭಟ್ ಮಾತನಾಡುತ್ತಾ “ವಿದ್ಯಾರ್ಥಿಗಳು ಗುರುವಿಗೆ ಅಗ್ರಸ್ಥಾನ ನೀಡಬೇಕು, ಸಮಾಜದ ಓರೆ ಕೋರೆಗಳನ್ನು ತಿದ್ದುವ ಕೆಲಸ ಸಾಹಿತ್ಯದಿಂದ ಸಾಧ್ಯ” ಎಂದರು. ಮತ್ತೋರ್ವ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಆಗಮಿಸಿದ್ದ ಸಂಗೀತ ಸಾಧಕಿ ರೂವಾರಿ ಡಾಟ್ ಕಾಮ್ ಡಿಜಿಟಲ್ ಪತ್ರಿಕೆ ಪ್ರಧಾನ ಸಂಪಾದಕಿ ಶ್ರೀಮತಿ ರತ್ನಾವತಿ ಜೆ .ಬೈಕಾಡಿ ಇವರು “ಮಕ್ಕಳು ಮೊಬೈಲಿಗೆ ಹೆಚ್ಚು ಆಸಕ್ತಿ ವಹಿಸುವುದರ ಬದಲು ಪುಸ್ತಕ, ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಮೃತ ಪ್ರಕಾಶ ಪತ್ರಿಕೆ, ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ನಿವೃತ್ತ ಶಿಕ್ಷಕಿ ಹಾಗೂ ಸಾಹಿತಿ ಡಾ. ಅರುಣ ನಾಗರಾಜ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ರಾಜೇಶ್ವರಿ ವಂದಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಭಾಷಾ ಪಠ್ಯ ಕ್ರಮದ ಆಧಾರಿತವಾಗಿ ಕರಾವಳಿ ನಿರ್ದಿಗಂತದಿಂದ ‘ಓದುವ ಆಟ’ ನಾಟಕ
    Next Article ಯಕ್ಷಾಂಗಣ ತಾಳಮದ್ದಳೆ ಸಪ್ತಾಹದಲ್ಲಿ ವಿದ್ವಾನ್ ಕಾಂತ ರೈ ಸಂಸ್ಮರಣೆ – ತುಳು ತಾಳಮದ್ದಳೆ
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ‘ನಟರಾಜ್ಯೋತ್ಸವ’ ನೃತ್ಯ ಪ್ರಸ್ತುತಿ | ನವೆಂಬರ್ 29

    November 28, 2026

    ಅಲೋಶಿಯಸ್ ಕಾಲೇಜಿನಲ್ಲಿ ‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ 2026’ | ನವೆಂಬರ್ 30

    November 28, 2026

    ಯಕ್ಷಾಂಗಣ ತಾಳಮದ್ದಳೆ ಸಪ್ತಾಹದಲ್ಲಿ ವಿದ್ವಾನ್ ಕಾಂತ ರೈ ಸಂಸ್ಮರಣೆ – ತುಳು ತಾಳಮದ್ದಳೆ

    November 28, 2026

    ಕನ್ನಡ ಭಾಷಾ ಪಠ್ಯ ಕ್ರಮದ ಆಧಾರಿತವಾಗಿ ಕರಾವಳಿ ನಿರ್ದಿಗಂತದಿಂದ ‘ಓದುವ ಆಟ’ ನಾಟಕ

    November 28, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.