ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರು ಸಂಪಾದಕತ್ವದ ಅಮೃತ ಪ್ರಕಾಶ ಪತ್ರಿಕೆಯ 12ನೇಯ ವಾರ್ಷಿಕೋತ್ಸವದ ಪ್ರಯುಕ್ತ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 21 ಜುಲೈ 2025ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ಮಾತನಾಡಿ “ಪತ್ರಿಕೆ ನಡೆಸುವುದು ಸುಲಭ ಕೆಲಸವಲ್ಲ ಅದಕೆ ಕಠಿಣ ಪರಿಶ್ರಮ ಅಗತ್ಯ. ಪತ್ರಿಕೆಯ ಜೊತೆಗೆ ಸಾಹಿತ್ಯಪರ ಕಾರ್ಯ ನಿರಂತರವಾಗಿ ಮಾಡುತ್ತಿದ್ದಾರೆ” ಎಂದು ಅಮೃತ ಪ್ರಕಾಶ ಪತ್ರಿಕೆಗೆ ಶುಭ ಹಾರೈಸಿದರು.
ಅಮೃತ ಪ್ರಕಾಶ ಪತ್ರಿಕೆಯ 12ನೇಯ ವರುಷದ ವಿಶೇಷ ಸಂಚಿಕೆ ಬಿಡುಗಡೆಯನ್ನು ಹೊಸದಿಗಂತ ಪತ್ರಿಕೆಯ ಸಂಪಾದಕರು ಹಾಗೂ ಮುಖ್ಯ ಕಾರ್ಯನಿರ್ವಾಧಿಕಾರಿ ಪಿ.ಎಸ್. ಪ್ರಕಾಶ್ ರವರು ಬಿಡುಗಡೆ ಮಾಡಿ “ಉತ್ತಮ ಗುಣಮಟ್ಟದ ಪತ್ರಿಕೆಯನ್ನು ನಡೆಸುತ್ತಾ ಸಮಾಜಕ್ಕೆ ತನ್ನಿ0ದ ಆಗುವ ಕೊಡುಗೆ ನೀಡಿತಾ ಬಂದಿದ್ದಾರೆ. ಇವರ ಕಾರ್ಯ ಶ್ಲಾಘನೀಯ” ಎಂದರು. ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ಬಾಳರವರು ಉಪಸ್ಥಿತರಿದ್ದರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕ ಮಂಡಳಿ ಸದಸ್ಯರಾದ ಸತ್ಯ ಪ್ರಕಾಶ್ ಶೆಟ್ಟಿ, ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿದ್ದರು. ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಶಿಕ್ಷಕಿ ಲೇಖಕಿ ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿದರು.