ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ನಡೆದ ಜಗತ್ತಿಗೆ ಭಾರತದ ಆಧ್ಯಾತ್ಮಿಕ ಚಿಂತನೆಯನ್ನು ಪರಿಚಯಿಸಿದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದರ ಕುರಿತಾದ ಚಿಂತನೆಗಳ ಉಪನ್ಯಾಸ ಮಾಲಿಕೆ ದಿನಾಂಕಲ 12 ಆಗಸ್ಟ್ 2025ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಭಾರತೀಯ ಸೇನಾಧಿಕಾರಿ ಬೆಳ್ಳಾಲ ಗೋಪಿನಾಥ್ ರಾವ್ ಮಾತನಾಡಿ “ಧಾವಂತದ ಜಗತ್ತು ನಿಮಗಾಗಿ ಕಾಯುವುದಿಲ್ಲ. ಕಷ್ಟಗಳನ್ನು ಅನುಭವಿಸಿದಾಗ ಗೆಲುವು ಸಾಧಿಸುವುದು ಸುಲಭ. ಜೀವದ ಭಯ ಇಲ್ಲದೆ ಗುರಿ ಇಟ್ಟುಕೊಂಡು ಕೆಲಸ ಮಾಡಿ. ದೇಶ ಮೊದಲು ಎಂಬ ಭಾವನೆ ಎಲ್ಲರಲ್ಲೂ ಮೂಡಿದಾಗ ದೇಶದ ಅಭಿವೃದ್ಧಿ ಸಾಧ್ಯ. ಸ್ವಾಮಿ ವಿವೇಕಾನಂದರ ಚಿಂತನೆಗಳ ಕಿಡಿ ನಿಮ್ಮಲ್ಲಿ ಹುಟ್ಟಿಕೊಂಡಾಗ ಬದುಕು ಉಜ್ವಲವಾಗುತ್ತದೆ” ಎಂದರು.
ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ. ಎನ್. ಮಾತನಾಡಿ, “ಸ್ವಾಮಿ ವಿವೇಕಾನಂದರ ಚಿಂತನೆಗಳು, ನಡೆದು ಬಂದ ಹಾದಿ ಶತಮಾನಗಳವರೆಗೂ ಇರುವಂತಹದ್ದು. ಅವರ ನುಡಿಮುತ್ತುಗಳು ನಮಗೆಲ್ಲ ದಾರಿ ದೀಪ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ನಾಯಕ್ ಬಿ., ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಹೆಚ್.ಜಿ. ಶ್ರೀಧರ್, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್. ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಸ್ವಾಗತಿಸಿ, ತೃತೀಯ ಬಿಎ ವಿದ್ಯಾರ್ಥಿ ಸವಿತಾ ನಿರೂಪಿಸಿ, ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ವಿಜಯಸರಸ್ವತಿ ವಂದಿಸಿದರು.
Subscribe to Updates
Get the latest creative news from FooBar about art, design and business.
Previous Articleಸಂಸ್ಕಾರ ಭಾರತೀ ವತಿಯಿಂದ ‘ನಟರಾಜ ಪೂಜನ್’ | ಆಗಸ್ಟ್ 19