ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಉಪ್ಪಳ ಘಟಕದ 7ನೇ ವಾರ್ಷಿಕೋತ್ಸವವನ್ನು 12 ಜನವರಿ 2025ರಂದು ಸಂಜೆ 6-30 ಗಂಟೆಗೆ ಕುಳೂರು ಶ್ರೀಹರಿ ಭಜನಾ ಮಂದಿರದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಉಪ್ಪಳ ಘಟಕದ ಅಧ್ಯಕ್ಷರಾದ ಶ್ರೀ ಪಿ.ಆರ್. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಭಾಗವತರಾದ ಶ್ರೀ ಜಿ.ಕೆ. ನಾವಡ ಬಾಯಾರು ಇವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ‘ಶ್ರೀಹರಿ ದರ್ಶನ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ.