ಮುಂಬಯಿ : ಭಾಂಡುಪ್ ಪಶ್ಚಿಮದ ಭಟ್ಟಿಪಾಡ ಶ್ರೀ ಶನೀಶ್ವರ ಮಂದಿರದಲ್ಲಿ ದಿನಾಂಕ 15-08-2023ರಂದು ಬೆಳಿಗ್ಗೆ 10 ಗಂಟೆಗೆ ಅಜೆಕಾರು ಕಲಾಭಿಮಾನಿ ಬಳಗದ ಅಜೆಕಾರು ಬಾಲಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ಊರಿನ ಪ್ರಸಿದ್ಧ ಕಲಾವಿದರಿಂದ ‘ಸ್ವಾಮಿ ಕೊರಗಜ್ಜೆ’ ಎಂಬ ತುಳು ಯಕ್ಷಗಾನ ತಾಳಮದ್ದಳೆ ಜರಗಿತು.
ತುಳುನಾಡಿನ ಕಾರಣೀಕ ದೈವ ಕೊರಗಜ್ಜನ ಮಹಿಮೆಯನ್ನು ಸಾರುವ ತಾಳಮದ್ದಳೆ ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ದೇವಿ ಪ್ರಸಾದ್ ಆಳ್ವ ತಲಪಾಡಿ ಮತ್ತು ಚಂಡೆಮದ್ದಳೆ ವಾದಕರಾಗಿ ದೇಲಂತಮಜಲು ಶ್ರೀ ಸುಬ್ರಹ್ಮಣ್ಯ ಭಟ್ ಹಾಗೂ ಶ್ರೀ ಪ್ರಶಾಂತ್ ಶೆಟ್ಟಿ ವಗೆನಾಡು ಭಾಗವಹಿಸಿದರು. ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಶ್ರೀ ದಿನೇಶ್ ಶೆಟ್ಟಿ ಕಾವಳಕಟ್ಟೆ, ಶ್ರೀ ಸದಾಶಿವ ಆಳ್ವ ತಲಪಾಡಿ ಮತ್ತು ಶ್ರೀ ಹರಿರಾಜ ಕಿನ್ನಿಗೋಳಿ ಅರ್ಥಧಾರಿಗಳಾಗಿದ್ದರು. ಶನೀಶ್ವರ ಮಂದಿರದ ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ ದಂಪತಿ ದೀಪ ಬೆಳಗಿದರು. ಶ್ರೀ ಸದಾನಂದ ಅಮೀನ್ ಸ್ವಾಗತಿಸಿದರು.