ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕೋಡಿಂಬಾಡಿ ಸಹಕಾರದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆ ಹಾಗೂ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಮಹಾಪೋಷಕತ್ವದಲ್ಲಿ ಸರಕಾರಿ ಪ್ರೌಢ ಶಾಲೆ ಶಾಂತಿನಗರದಲ್ಲಿ ಗ್ರಾಮ ಸಾಹಿತ್ಯ ಸಂಭ್ರಮದ 8ನೇ ಸರಣಿ ಕಾರ್ಯಕ್ರಮ ದಿನಾಂಕ 26-08-2023ರಂದು ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೋಡಿಂಬಾಡಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕ.ಸಾ.ಪ. ಪುತ್ತೂರು ತಾಲೂಕು ಅಧ್ಯಕ್ಷರಾದ ಪುತ್ತೂರು ಶ್ರೀ ಉಮೇಶ್ ನಾಯಕ್ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಕೋಡಿಂಬಾಡಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ರೋಹಿತ್, ಸಿ.ಆರ್.ಪಿ.ಒ. ಶ್ರೀ ಮಹಮ್ಮದ್ ಅಶ್ರಫ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಪ್ರಕಾಶ್ ಗೌಡ ಭಾಗವಹಿಸಲಿರುವರು.
ಹಿರಿಯ ಸಾಹಿತಿಗಳಾದ ಶ್ರೀ ರಾಜೇಂದ್ರ ಆರಿಗ, ಪತ್ರಕರ್ತ ಶ್ರೀ ಸಂತೋಷ್ ಕುಮಾರ್, ನಾಟಕ ರಚನೆಕಾರರಾದ ಶ್ರೀ ವಿಶ್ವನಾಥ್.ಎಚ್, ಯಕ್ಷಗಾನ ಕಲಾವಿದರಾದ ಶ್ರೀ ಜಗನ್ನಾಥ ಶೆಟ್ಟಿ ನಡುಮನೆ, ಸಾಹಿತಿಗಳು ಮತ್ತು ಸಂಘಟಕರಾದ ಶ್ರೀ ನಿರಂಜನ್ ರೈ ಮಠಂತಬೆಟ್ಟು, ಯುವ ಬರಹಗಾರರಾದ ಕು. ವೈಶಾಲಿಯವರನ್ನು ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಮಾನ್ಯ ಶಾಸಕರು ಅಭಿನಂದಿಸುವರು. ಕಾರ್ಯಕ್ರಮದಲ್ಲಿ ‘ಸಾಹಿತ್ಯ ಮತ್ತು ಶಿಕ್ಷಣಕ್ಕೆ ಕೋಡಿಂಬಾಡಿ ಹಾಗೂ ಬೆಳ್ಳಿಪ್ಪಾಡಿ ಗ್ರಾಮದ ಕೊಡುಗೆ’ ಎಂಬ ವಿಷಯದಲ್ಲಿ ಉಪನ್ಯಾಸವನ್ನು ಶ್ರೀಮತಿ ಯಶೋಧ ನೀಡಲಿದ್ದು, ಬಳಿಕ ವಿದ್ಯಾರ್ಥಿಗಳಿಗಾಗಿ ಬಾಲ ಕವಿಗೋಷ್ಠಿ, ಬಾಲಕಥಾಗೋಷ್ಠಿ, ಯುವಕವಿ ಗೋಷ್ಠಿ, ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.