ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ-ವಾಚಕಿಯರ ಸಂಘ (ರಿ.) ವತಿಯಿಂದ ಡಾ. ಕೆ.ವಿ. ಜಲಜಾಕ್ಷಿ ಸಂಸ್ಮರಣಾ ಕಾರ್ಯಕ್ರಮ ಹಾಗೂ ಕವನ ರಚನಾ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವು ದಿನಾಂಕ : 09-09-2023ನೇ ಶನಿವಾರ ಅಪರಾಹ್ನ ಗಂಟೆ 2.30ಕ್ಕೆ ಉರ್ವಸ್ಟೋರಿನ ಸಾಹಿತ್ಯ ಸದನದಲ್ಲಿ ನಡೆಯಲಿದೆ.
ಡಾ. ಕೆ.ವಿ. ಜಲಜಾಕ್ಷಿ ಸಂಸ್ಮರಣಾ ಪ್ರತಿಷ್ಠಾನದ ವಿ.ಜಿ. ಭಟ್ ಇವರು ಪ್ರಸ್ತಾವನೆ ಮಾಡಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಭಾರತಿ ಪಿಲಾರ್ ಇವರು ಸಂಸ್ಮರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ವಿಶ್ರಾಂತ ಮುಖ್ಯಸ್ಥರಾದ ಡಾ.ನರಸಿಂಹಮೂರ್ತಿ ಭಾಗವಹಿಸಲಿದ್ದು, ಕ.ಲೇ.ವಾ. ಸಂಘದ ಅಧ್ಯಕ್ಷರಾದ ಡಾ. ಜ್ಯೋತಿ ಚೇಳ್ಯಾರು ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಜರಗಲಿದೆ. ವಿಶ್ರಾಂತ ಶಿಕ್ಷಕಿಯಾದ ಶ್ರೀಮತಿ ಉಷಾ ಎಂ. ಇವರಿಂದ ತೀರ್ಪುಗಾರರ ಅನಿಸಿಕೆ ಹಾಗೂ ಶ್ರೀಮತಿ ಗುಣವತಿ ರಮೇಶ್ ಮತ್ತು ಶ್ರೀಮತಿ ಸುಮಾ ಬಾರ್ಕೂರ್ ಇವರುಗಳು ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ.
ಕರಾವಳಿ ಲೇಖಕಿಯರ-ವಾಚಕಿಯರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಈ ಕಾರ್ಯಕ್ರಮಕ್ಕೆ ಆದರದ ಸ್ವಾಗತ ಕೋರಿದ್ದಾರೆ.