ಮಂಗಳೂರು : ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳೂರು ವಿವಿ, ವಿಶ್ವವಿದ್ಯಾನಿಲಯ ಕಾಲೇಜು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ, ಕಜೆಮಾರು ಕೆದಂಬಾಡಿ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ಆಯೋಜಿಸಲಾದ ಸರ್ವ ಸಮಾನತೆ-ಗಾಂಧೀಜಿ ವಿಚಾರಧಾರೆಯ ಪ್ರಸ್ತುತತೆ, ನಾಗರಿಕ ಸೇವೆಯಲ್ಲಿ ಸ್ವಚ್ಛತೆ ಮತ್ತು ಪ್ರಾಮಾಣಿಕತೆ ಕುರಿತ ವಿಚಾರ ಸಂಕಿರಣ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 01-09-2023ರಂದು ನಡೆಯಿತು.
ಈ ಕಾರ್ಯಕ್ರಮವನ್ನು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಉದ್ಘಾಟಿಸಿ, ಮುಖ್ಯ ಅತಿಥಿಯಾಗಿ ಸಿ.ಪಿ.ಎಂ ಪಾಲಿಟ್ ಬ್ಯೂರೋ ಸದಸ್ಯ ಕೇರಳದ ಮಾಜಿ ಸಚಿವ ಎಂ.ಎ.ಬೇಬಿ ಭಾಗವಹಿಸಿದರು. ಮಾಜಿ ಸಂಸದ ಪಿ.ಕರುಣಾಕರನ್, ನಿವೃತ್ತ ಸೆಂಟ್ರಲ್ ಆಡಳಿತ ಟ್ರಿಬ್ಯೂನಲ್ ಸದಸ್ಯ ಸುಧೀರ್ ಕುಮಾರ್ ಉಪಸ್ಥಿತರಿದ್ದು, ಮಂಗಳೂರು ವಿವಿ.ಉಪ ಕುಲಪತಿ ಪ್ರೊ.ಜಯರಾಜ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ‘ಸಮಾನತೆಗಾಗಿ ಸಂಘರ್ಷ’ (ಹೋರಾಟದಲ್ಲೇ ಕೃಷ್ಣ ಶೆಟ್ಟಿ ಬದುಕು) ಕೃತಿಯನ್ನು ಸಂಸತ್ ಮಾಜಿ ಸದಸ್ಯ ಪಿ.ಕರುಣಾಕರನ್ ಅವರ ಪತ್ನಿ ಲೈಲಾ ಕರುಣಾಕರನ್ ಹಾಗೂ ಕೆ. ಪ್ರಮೋದ್ ಕುಮಾರ್ ರೈ ಅವರ ಸರ್ಕಾರಿ ಸೇವೆಯಿಂದ ಹೊಲದೆಡೆಗಿನ ನಡೆ ಎಂಬ ‘ಮಣ್ಣಿಗೆ ಮರಳುವ ಮುನ್ನ’ ಕೃತಿಯನ್ನು ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ವಿ.ಬಾಲಸುಬ್ರಹ್ಮಣ್ಯನ್ ಅವರು ಬಿಡುಗಡೆಗೊಳಿಸಿದರು.
ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನದ ಪ್ರಮುಖರಾದ ಪ್ರಮೋದ್ ರೈ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಜತಿನ್ ಕೃಷ್ಣ ಹಾಗೂ ಕೋನಾರ್ಕ್ ರೈ ಅತಿಥಿಗಳನ್ನು ಗೌರವಿಸಿದರು. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ವಂದಿಸಿದರು. ಮಂಗಳೂರು ವಿವಿ ಕಾಲೇಜಿನ ಯುವ ರೆಡ್ ಕ್ರಾಸ್ ಅಧಿಕಾರಿ ಡಾ.ಭಾರತಿ ಪಿಲಾರ್, ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ನಿರೂಪಿಸಿದರು.