ಕಾಪು : ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ವತಿಯಿಂದ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನ, ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಮತ್ತು ಕಾಪು ವಿಧಾನಸಭಾ ಕ್ಷೇತ್ರ ವಿಶ್ವಬ್ರಾಹ್ಮಣ ಯುವ ಸಂಘಟನೆಯ ಆಶ್ರಯದಲ್ಲಿ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಜಯಂತಿಯನ್ನು ದಿನಾಂಕ 17-09-2023ರಂದು ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಸಾಧಕರನ್ನು ಸನ್ಮಾನಿಸಿದರು. ಕಾಪು ತಹಶೀಲ್ದಾರ್ ನಾಗರಾಜ್ ವಿ.ನಾಯ್ಕಡ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮುರುಡೇಶ್ವರದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಚೇಂಪಿ ದಿನೇಶ್ ಆಚಾರ್ಯ ಉಪನ್ಯಾಸ ನೀಡಿದರು.
ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮುಕ್ತೇಸರ ಶೇಖರ ಆಚಾರ್ಯ, ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರ ನವೀನ್ ಆಚಾರ್ಯ ಪಡುಬಿದ್ರಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ಕಾಪು ವಿಶ್ವ ಬ್ರಾಹ್ಮಣ ಯುವ ಸಂಘಟನ ಅಧ್ಯಕ್ಷ ಸುಧಾಕರ ಆಚಾರ್ಯ ಬಿಳಿಯಾರು, ನಿವೃತ್ತ ತಹಶೀಲ್ದಾರ್ ಕೆ.ಮುರಳೀಧರ್, ಕಾಪು ಉಪ ತಹಶೀಲ್ದಾರ್ ರವಿಕಿರಣ್, ಪ್ರಭಾರ ಕಂದಾಯ ನಿರೀಕ್ಷಕ ಅರುಣ್ ಕುಮಾರ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪಂಚಶಿಲ್ಪ ವೃತ್ತಿಯ ಶಿಲ್ಪಿಗಳಾದ ಶ್ರೀನಿವಾಸ ಆಚಾರ್ಯ ಬಿಳಿಯಾರು, ಹರೀಶ್ ಆಚಾರ್ಯ ಮಜೂರು, ವಿಷ್ಣುಮೂರ್ತಿ ಆಚಾರ್ಯ ಬಂಟಕಲ್ಲು, ರಾಘವೇಂದ್ರ ಆಚಾರ್ಯ ಎಲ್ಲೂರು ಹಾಗೂ ಮಂಜುನಾಥ ಆಚಾರ್ಯ ಎರ್ಮಾಳು ಅವರನ್ನು ಸಮಾಸಲಾಯಿತು.
ಕಾಪು ಕಾಳಿಕಾಂಬಾ ದೇವಸ್ಥಾನದ ಎರಡನೇ ಮುಕ್ತೇಸರ ಗಣೇಶ ಆಚಾರ್ಯ ಉಚ್ಚಿಲ ಸ್ವಾಗತಿಸಿ, ತೃಷಾ ವ೦ದಿಸಿದರು. ರಾಜೇಶ್ ಆಚಾರ್ಯ ಬಿಳಿಯಾರು, ಗಂಗಾಧರ ಆಚಾರ್ಯ ದಿಂಡಿಬೆಟ್ಟು ಹಾಗೂ ರತ್ನಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.