ಉಡುಪಿ/ಮಂಗಳೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸಂದರ್ಭ ಕರ್ನಾಟಕ ಸಂಭ್ರಮ 50 ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯ, ವರ್ಣಮಯ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ವಿಶೇಷ ಮೆರಗು ನೀಡಲು ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉದ್ದೇಶಿಸಿದೆ.
ಈ ಸಂಭ್ರಮ ಹೆಚ್ಚಿಸಲು ಕನ್ನಡ ನಾಡು-ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ.25,000/- ಬಹುಮಾನ ನಿಗದಿಪಡಿಸಲಾಗಿದೆ. ಲಾಂಛನದ ಮಾದರಿಯನ್ನು ಕಳುಹಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ಆಸಕ್ತರು ಮಾಹಿತಿಗೆ https://www.kannadasiri.karnataka.gov.in ನೋಡಬಹುದು.