ಉಡುಪಿ : ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ ತನ್ನ 59ನೇ ವರ್ಷದಲ್ಲಿ, 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ದಿ. ಡಾ. ಟಿ.ಎಂ.ಎ. ಪೈ, ದಿ. ಎಸ್.ಎಲ್. ನಾರಾಯಣ ಭಟ್ ಮತ್ತು ದಿ.ಮಲ್ಪೆ ಮಧ್ವರಾಜ್ ಸ್ಮಾರಕ ನಡೆಯಲಿರುವ ಈ ಸ್ಪರ್ಧೆಯು 2023ರ ನವಂಬರ್ ತಿಂಗಳ 4ನೇ ವಾರದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಟ 1 ಘಂಟೆ 30 ನಿಮಿಷ ಹಾಗೂ ಗರಿಷ್ಠ 2 ಘಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಈ ಬಾರಿ ಸ್ಪರ್ಧೆಗೆ ಗರಿಷ್ಠ 12 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.
ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ. 35,000/-, ರೂ.25,000/- ರೂ.15,000/- ನಗದು ಬಹುಮಾನಗಳನ್ನು ಹಾಗೂ ಪರ್ಯಾಯ ಫಲಕಗಳನ್ನು ನೀಡಲಾಗುವುದು. ಶ್ರೇಷ್ಠ ನಿರ್ದೇಶನ, ನಟ, ನಟಿ, ಸಂಗೀತ, ಬೆಳಕು, ರಂಗಪರಿಕರ, ಪ್ರಸಾಧನ, ಬಾಲನಟನೆ, ಹಾಸ್ಯ ಪಾತ್ರಗಳಿಗೂ ನಗದು ಬಹುಮಾನ ಹಾಗೂ ಶಾಶ್ವತ ಫಲಕಗಳನ್ನು ನೀಡಲಾಗುವುದು, ಸ್ಪರ್ಧೆಯಲ್ಲಿ ಅತ್ಯಂತ ಶಿಸ್ತುಬದ್ಧವಾಗಿದ್ದ ತಂಡಕ್ಕೆ ವಿಶೇಷ ಪುರಸ್ಕಾರವಿರುವುದು.
ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಊಟ, ವಸತಿ ಜೊತೆಗೆ ಉಡುಪಿಗೆ ಹೋಗಿ ಬರುವ ಒಟ್ಟು ದೂರಕ್ಕೆ ಕಿಲೋ ಮೀಟರಿಗೆ ರೂ. 15/ ರಂತೆ ಕನಿಷ್ಠ ರೂ. 1500/- ಹಾಗೂ ಗರಿಷ್ಠ ರೂ. 17000/- ಪ್ರಯಾಣ ವೆಚ್ಚ ನೀಡಲಾಗುವುದು. ಇದರೊಂದಿಗೆ ಪ್ರತೀ ತಂಡಕ್ಕೆ ಗೌರವಧನವಾಗಿ ರೂ. 5000/-ವನ್ನು ನೀಡಲಾಗುವುದು.
ಭರ್ತಿ ಮಾಡಿದ ಪ್ರವೇಶ ಪತ್ರ ಸ್ವೀಕರಿಸಲು 2023ರ ಅಕ್ಟೋಬರ್ 21 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ತಂಡಗಳು ಪ್ರವೇಶ ಪತ್ರಕ್ಕಾಗಿ ಪ್ರದೀಪ್ ಚಂದ್ರ ಕುತ್ಪಾಡಿ, ಪ್ರಧಾನ ಕಾರ್ಯದರ್ಶಿ, ‘ರಂಗಭೂಮಿ’, ಕುತ್ಪಾಡಿ, ಉಡುಪಿ-574118 ಮೊಬೈಲ್ ಸಂಖ್ಯೆ : 9448952847(ಪ್ರದೀಪ್‌ಚಂದ್ರ ಕುತ್ಪಾಡಿ) ಇವರನ್ನು ಸಂಪರ್ಕಿಸಬೇಕು ಅಥವಾ ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು (9844742166) ಅಥವಾ ಜತೆ ಕಾರ್ಯದರ್ಶಿಗಳಾದ ಶ್ರೀಪಾದ ಹೆಗಡೆ (9845111449) ಹಾಗೂ ವಿವೇಕಾನಂದ ಎನ್. (9449367595) ಇವರನ್ನು ಸಂಪರ್ಕಿಸಬಹುದು.
ಪ್ರವೇಶ ಪತ್ರಕ್ಕಾಗಿ ಕೆಳಗಿನ ಲಿಂಕ್ ಬಳಸಿ
Nataka Sparde Application Form 2023 final