ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಕೋಟತಟ್ಟು, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಹುಟ್ಟೂರ ಪ್ರಶಸ್ತಿಗೆ 19ನೇ ವರುಷದ ಸಂಭ್ರಮ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ‘ಇಂಪನ’ ಸಂಗೀತ ಸಂಪುಟದ ಸಂಚಲನ ಕಾರ್ಯಕ್ರಮವು ದಿನಾಂಕ 03-10-2023ರಿಂದ 10-10-2023ರವರೆಗೆ ಕೋಟದ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ನಡೆಯಲಿದೆ.
ದಿನಾಂಕ 03-10-2023ರಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಇವರು ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ಕುಂದಾಪುರ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಎ. ಕಿರಣ ಕುಮಾರ್ ಕೊಡ್ಗಿಯವರು ಅಧ್ಯಕ್ಷತೆ ವಹಿಸಲಿರುವರು.
ದಿನಾಂಕ 04-10-2023ರಿಂದ 08-10-2023ರವರೆಗೆ ಕಾರಂತ ದರ್ಶನ : ಚಲನಚಿತ್ರ ಪ್ರದರ್ಶನಗಳು ಪ್ರತಿದಿನ ಸಂಜೆ 6ರಿಂದ ಪ್ರದರ್ಶನಗೊಳ್ಳಲಿವೆ. ದಿನಾಂಕ 04-10-2023ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟ ಇಲ್ಲಿ ‘ಮಾರ್ಡನ್ ಮಹಾಭಾರತ’, ದಿನಾಂಕ 05-10-2023ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಇಲ್ಲಿ ‘ಕೋಳಿತಾಳ್’, ದಿನಾಂಕ 06-10-2023ರಂದು ವಿವೇಕ ವಿದ್ಯಾ ಸಂಸ್ಥೆಗಳು ಕೋಟ ಇಲ್ಲಿ ‘ಮೂಕಜ್ಜಿಯ ಕನಸುಗಳು’, ದಿನಾಂಕ 07-10-2023ರಂದು ವಿವೇಕ ವಿದ್ಯಾ ಸಂಸ್ಥೆಗಳು ಕೋಟ ಇಲ್ಲಿ ‘ಕಾಂತಾರ’, ದಿನಾಂಕ 08-10-2023ರಂದು ಶಾಂಭವಿ ವಿದ್ಯಾದಾಯಿನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟ ಇಲ್ಲಿ ‘ಸುಗಂಧಿ’ ಚಲನಚಿತ್ರ ಪ್ರದರ್ಶನ ಮತ್ತು ದಿನಾಂಕ 09-10-2023ರಂದು ಡಾ. ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ (ರಿ.) ಕೋಟ ಇದರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ದಿನಾಂಕ 10-10-2023ರಂದು ಸಂಜೆ 4 ಗಂಟೆಗೆ ‘ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ’ ಸಮಾರಂಭವು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ. ಸತೀಶ್ ಕುಂದರ್ ಇವರು ಅಧ್ಯಕ್ಷತೆ ವಹಿಸಲಿದ್ದು, ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಇವರು ದೀಪ ಪ್ರಜ್ವಲನೆ ಮಾಡಲಿರುವರು. ಇದೇ ಸಂದರ್ಭದಲ್ಲಿ ಖ್ಯಾತ ಶಾಸ್ತ್ರೀಯ ಸಂಗೀತಗಾರರಾದ ಡಾ.ವಿದ್ಯಾಭೂಷಣ ಇವರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಜೆ ಗಂಟೆ 6ರಿಂದ ಜಿಲ್ಲೆಯ ಖ್ಯಾತ ಕಲಾವಿದರಿಂದ ಮಧುರ ಗೀತೆಗಳ ಮಧುರಯಾನ ‘ಮಾರ್ದನಿ’ ಸಂಗೀತ ಕಾರ್ಯಕ್ರಮವು ನಡೆಯಲಿದೆ.