ಬೆಂಗಳೂರು : ಹಿಂದೂಸ್ತಾನಿ ಸಂಗೀತದ ಅಧ್ಯಯನ ಮತ್ತು ಅಧ್ಯಾಪನದಲ್ಲಿ 20 ವರ್ಷಗಳಿಂದ ಕಾರ್ಯನಿರತವಾಗಿರುವ ಸ್ವರ ಗಾಂಧಾರ ಸಂಗೀತ ವಿದ್ಯಾಲಯ ಅರ್ಪಿಸುವ ವಿಂಶತಿ ಗಾನ ಸಂಭ್ರಮ ಹಾಗೂ ಗುರುವಂದನಾ ಕಾರ್ಯಕ್ರಮವು ದಿನಾಂಕ 02-10-2023ರ ಸೋಮವಾರದಂದು ನಡೆಯಲಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅಖಿಲ ಹವ್ಯಕ ಮಹಾಸಭಾದಲ್ಲಿ ಸಂಜೆ ಘಂಟೆ 5.00 ರಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮಾನ್ಯ ಉಪಕುಲಪತಿಗಳಾದ ಡಾ.ಅಹಲ್ಯಾ ಶರ್ಮಾ ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಡಾ.ಮಲ್ಲೇಪುರಂ ಜಿ.ವೆಂಕಟೇಶ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಳಗ್ಗೆ ಘಂಟೆ 9.00ರಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯ ನಂತರ ವಿದ್ಯಾಲಯದ ವಿದ್ಯಾರ್ಥಿಗಳಿಂದ ಗಾಯನ ಪ್ರಸ್ತುತಿ ನಡೆಯಲಿದ್ದು, ತಬಲಾದಲ್ಲಿ ಶ್ರೀ ಪ್ರಕಾಶ ದೇಶಪಾಂಡೆ, ಶ್ರೀ ನಾಗರಾಜ ಹೆಗಡೆ, ಶ್ರೀ ಮಂಜುನಾಥ ಭಟ್ ಹಾಗೂ ಹಾರ್ಮೋನಿಯಂನಲ್ಲಿ ಶ್ರೀಮತಿ ಪ್ರತಿಭಾ ಹೆಗಡೆ ಸಹಕರಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಸಂಜೆ ಘಂಟೆ 6.00ರಿಂದ ನಡೆಯಲಿರುವ ‘ಗಾನ ಸಂಭ್ರಮ’ದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕರಾದ ವಿದುಷಿ ಶ್ರೀಮತಿ ಪೂರ್ಣಿಮಾ ಭಟ್ ಕುಲ್ಕರ್ಣಿ ಗಾಯನ ಪ್ರಸ್ತುತಪಡಿಸಲಿದ್ದು, ಇವರಿಗೆ ತಬಲಾದಲ್ಲಿ ಪಂಡಿತ್ ಗುರುಮೂರ್ತಿ ವೈದ್ಯ ಹಾಗೂ ಹಾರ್ಮೋನಿಯಂನಲ್ಲಿ ಶ್ರೀಯುತ ಸೂರ್ಯಉಪಾಧ್ಯಾಯ ಸಹಕರಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಸ್ವರ ಗಾಂಧಾರ ಸಂಗೀತ ವಿದ್ಯಾಲಯದ ಅಧ್ಯಕ್ಷೆಯಾದ ಶ್ರೀಮತಿ ಪ್ರತಿಭಾ ಜಗದೀಶ್ ಹೆಗಡೆ ಹಾಗೂ ಸಂಸ್ಥೆಯ ಎಲ್ಲಾ ವಿಶ್ವಸ್ಥರು ಸರ್ವರಿಗೂ ಸ್ವಾಗತ ಕೋರಿದ್ದಾರೆ.