ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿಯ ಉದ್ಘಾಟನಾ ಸಮಾರಂಭವವು ದಿನಾಂಕ 1-10-2023ರಂದು ಮಂಗಳೂರಿನ ಬಳ್ಳಾಲ್‌ಬಾಗಿನಲ್ಲಿರುವ ಲೋಕಯ್ಯ ಶೆಟ್ಟಿ ರಸ್ತೆಯಲ್ಲಿನ ಶ್ರೀ ದುರ್ಗಾ ಕಾಂಪ್ಲೆಕ್ಸ್, 3ನೇ ಮಹಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು ಇವರು “ಭಾರತೀಯ ಕಲೆಗಳು ವ್ಯಕ್ತಿತ್ವ ವಿಕಸನದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಹೀಗಾಗಿ ಇಂತಹ ಕಲೆಗಳನ್ನು ಬೆಳೆಸುವುದು ಪ್ರತಿಯೊಬ್ಬನ ಕರ್ತವ್ಯ” ಎಂದು ತಿಳಿಸಿದರು.
ಸಿಮ್ ಟೆಕ್ನಾಲಜೀಸ್ ಗ್ರೂಪಿನ ಮಾಲೀಕರಾದ ನವೀನ್ ಕಿಲ್ಲೆ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ್ ಶೆಟ್ಟಿ, ಸಿಂಫನಿ ಸಂಸ್ಥೆಯ ಮಾಲೀಕರಾದ ಶ್ರೀ ಲಾಯ್ ನೊರೊನ್ಹಾ, ಸಂಗೀತ ಗುರುಗಳೂ, ಕಲಾವಿದರೂ ಆದ ವಿದ್ವಾನ್ ಅನೀಶ್ ವಿ. ಭಟ್, ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಅಧ್ಯಕ್ಷರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ಪ್ರಸಿದ್ಧ ನಾಗಸ್ವರ ವಿದ್ವಾಂಸ ವಿದ್ವಾನ್ ನಾಗೇಶ್ ಎ. ಬಪ್ಪನಾಡು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಬಾಲಕೃಷ್ಣ ಸರಳಾಯ ಕಾರ್ಯಕ್ರಮ ನಿರೂಪಿಸಿ, ಶೋಭಿತ ಭಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಕೃತಿಗಳನ್ನು ಪ್ರಾರ್ಥನೆಯ ರೂಪದಲ್ಲಿ ಪ್ರಸ್ತುತಪಡಿಸಿದರು.
ಹೆಚ್ಚಿನ ಮಾಹಿತಿಗಾಗಿ ಪಿ.ನಿತ್ಯಾನಂದ ರಾವ್ -9742792669