ಬೆಳಗಾವಿ : ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ಬೆಳಗಾವಿ, ಐಕ್ಯೂಎಸಿ ಕನ್ನಡ ವಿಭಾಗ ಹಾಗೂ ಬೆಳಗಾವಿಯ ಡಾ. ಡಿ.ಎಸ್.ಕರ್ಕಿ ಪ್ರತಿಷ್ಠಾನ ಟ್ರಸ್ಟ್ (ರಿ.) ಸಹಯೋಗದಲ್ಲಿ ‘ಕರ್ನಾಟಕ ಸಂಭ್ರಮ-50’ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಡಾ. ಡಿ.ಎಸ್. ಕರ್ಕಿ ಅವರ 116ನೇ ಜಯಂತ್ಯುತ್ಸವದ ಪ್ರಯುಕ್ತ ‘ಕನ್ನಡದ ದೀಪ : ಡಾ. ಡಿ.ಎಸ್. ಕರ್ಕಿ’ ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 22-11-2023 ಮಂಗಳವಾರ, ಪೂರ್ವಾಹ್ನ 11:30 ಗಂಟೆಗೆ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ನಡೆಯಲಿದೆ.
ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಜ್ಯೋತಿ ಎಸ್. ಕವಳೇಕರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಡಿ.ಎಸ್. ಕರ್ಕಿ ಪ್ರತಿಷ್ಠಾನ ಟ್ರಸ್ಟಿನ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ವಿಜಯಲಕ್ಷ್ಮೀ ತಿರ್ಲಾಪೂರ ನಡೆಸಲಿದ್ದು, ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಡಾ. ಭೀಮಾಶಂಕರ ಜೋಷಿ ಇವರು ಭಾಗವಹಿಸಲಿರುವರು.