ಉಡುಪಿ : 2017 ಸಾಲಿನ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಸ್ಪರ್ಧೆ ‘ಯು.ಎಫ್.ಸಿ. ಮಕ್ಕಳ ಹಬ್ಬ- 2023’ವು ದಿನಾಂಕ 25-1-2023ರ ಶನಿವಾರ ಬೆಳಿಗ್ಗೆ ಗಂಟೆ 9.30ರಿಂದ ಉದ್ಯಾವರ ಶ್ರೀ ವಿಠೋಬ ರುಖುಮಾಯಿ ನಾರಾಯಣಗುರು ಮಂದಿರದಲ್ಲಿ ಜರಗಲಿದೆ.
ಬೆಳಗ್ಗೆ ಗಂಟೆ 9.30ಕ್ಕೆ ಜರಗುವ ಉದ್ಘಾಟನಾ ಸಮಾರಂಭದಲ್ಲಿ ಮಕ್ಕಳ ಹಬ್ಬದ ಉದ್ಘಾಟನೆಯನ್ನು ಝೀ ಟಿವಿ ಸರಿಗಮಪ ಲಿಟಲ್ ಚಾಂಪಿಯನ್ ಶಿಪ್ ಸೀಸನ್ – 19ರ ದ್ವಿತೀಯ ಪ್ರಶಸ್ತಿ ವಿಜೇತೆ ಕು. ಶಿವಾನಿ ನವೀನ್ ನೆರವೇರಿಸಲಿರುವರು. ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀ ಉದಯ ಶೆಟ್ಟಿ ಮುನಿಯಾಲು ಮತ್ತು ಉಡುಪಿ ಜಿಲ್ಲಾ ಅನಿವಾಸಿ ಭಾರತೀಯರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಉಡುಪಿ ಶೇಖ್ ವಾಹಿದ್ ಭಾಗವಹಿಸಲಿದ್ದಾರೆ.
ಸಂಜೆ ಗಂಟೆ 4.00ಕ್ಕೆ ಜರಗುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಜಯರಾಜ್ ಅಮೀನ್ ವಹಿಸಲಿದ್ದು, ಮಂಗಳೂರಿನ ನಾದನೃತ್ಯ ಸ್ಕೂಲ್ ಆಫ್ ಡ್ಯಾನ್ಸ್ ಎಂಡ್ ಕಲ್ಚರಲ್ ಟ್ರಸ್ಟಿನ ನಿರ್ದೇಶಕಿಯಾದ ವಿದುಷಿ ಭ್ರಮರಿ ಶಿವಪ್ರಕಾಶ್ ಸಮಾರೋಪ ಭಾಷಣ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಉಡುಪಿ ಕಾಂಚನ್ ಹುಂಡೈ ಮೋಟರ್ಸ್ ಇದರ ನಿರ್ದೇಶಕರಾದ ಶ್ರೀ ಪ್ರಸಾದ್ ರಾಜ್ ಕಾಂಚನ್ ಮತ್ತು ಉದ್ಯಾವರ ಹಲೀಮಾ ಸಾಬ್ಜು ಅಡಿಟೋರಿಯಂ ಟ್ರಸ್ಟಿನ ಆಡಳಿತ ವಿಶ್ವಸ್ಥರಾದ ಶ್ರೀ ಅಬ್ದುಲ್ ಜಲೀಲ್ ಸಾಹೇಬ್ ಭಾಗವಹಿಸಲಿದ್ದಾರೆ. ಸಂಸ್ಥೆಯ ಗೌರವಾಧ್ಯಕ್ಷರಾದ ಉದ್ಯಾವರ ಶ್ರೀ ನಾಗೇಶ್ ಕುಮಾರ್, ಅಧ್ಯಕ್ಷರಾದ ಶ್ರೀ ತಿಲಕ್ ರಾಜ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿಯಾದ ಅಬಿದ್ ಆಲಿ, ಕೋಶಾಧಿಕಾರಿಯಾದ ಪ್ರೇಮ್ ಮಿನೇಜಸ್ ಮತ್ತು ಸರ್ವ ಸದಸ್ಯರು ತಮಗೆಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.