Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ
    Yakshagana

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    November 25, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗ‌ಣ ಮಂಗಳೂರು, ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023’ ಹನ್ನೊಂದನೇ ವರ್ಷದ ನುಡಿ ಹಬ್ಬದಲ್ಲಿ ದಿನಾಂಕ 22-11-2023ರಂದು ಯಕ್ಷಗಾನದ ಪ್ರಸಿದ್ಧ ಹಾಸ್ಯಪಟು ದಿ| ಬೆಟ್ಟಂಪಾಡಿ ಬಾಳಪ್ಪ ಶೆಟ್ಟರ ಸಂಸ್ಮರಣಾ ಸಮಾರಂಭ ನಡೆಯಿತು.

    ಈ ಸಮಾರಂಭವನ್ನು ಉದ್ಘಾಟಿಸಿದ ಶ್ರೀ ರಾಮಕೃಷ್ಣ ಕೋ-ಆಪರೇಟಿವ್ ಸೊಸೈಟಿ (ಲಿ.) ಇದರ ಅಧ್ಯಕ್ಷರಾದ ಶ್ರೀ ಜೈರಾಜ್ ಬಿ.ರೈ ಇವರು ಮಾತನಾಡಿ “ಸಾಧನಾಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ ಮಾದರಿಯಾಗಿ ನಿಲ್ಲುತ್ತಾರೆ. ಅವರ ಸುಪುತ್ರ ಯಕ್ಷಾಂಗಣದೊಂದಿಗೆ ಕೈಜೋಡಿಸಿ ಬಾಳಪ್ಪ ಶೆಟ್ಟರ ಸಂಸ್ಮರಣೆ ನಡೆಸುತ್ತಿರುವುದು ಅಭಿನಂದನೀಯ” ಎಂದು ಹೇಳಿದರು.

    ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಸ್ಮರಣಾ ಭಾಷಣ ಮಾಡಿ ದಿವಂಗತ ಬಾಳಪ್ಪ ಶೆಟ್ಟರ ಬದುಕು ಮತ್ತು ಸಾಧನೆಯನ್ನು ಪರಿಚಯಿಸಿದರು. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದಲ್ಲಿ ತಾನು ಅವರೊಂದಿಗೆ ದುಡಿದ ದಿನಗಳನ್ನು ಸ್ಮರಿಸಿದರು.

    ಸಮಾರಂಭದಲ್ಲಿ ದಿ| ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಪ್ರತಿಷ್ಠಾನದ ವತಿಯಿಂದ ಯಕ್ಷಗಾನ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯ ಮತ್ತು ಲೀಲಾವತಿ ಬೈಪಾಡಿತ್ತಾಯ ದಂಪತಿಯನ್ನು ಸನ್ಮಾನಿಸಲಾಯಿತು. ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ಅವರಿಗೆ ‘ಬಾಳಪ್ಪ ಶೆಟ್ಟಿ ಪ್ರಶಸ್ತಿ -2023’ಯನ್ನು ಗೌರವ ನಿಧಿಯೊಂದಿಗೆ ನೀಡಿ ಗೌರವಿಸಲಾಯಿತು. ಮುಂಬೈ ಉದ್ಯಮಿ ಬಾಬು ಶೆಟ್ಟಿ ಪೆರಾರ ಪ್ರಶಸ್ತಿ ಪ್ರದಾನ ಮಾಡಿದರು. ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಶುಭಾಶಂಸನೆಗೈದರು. ಶ್ಯಾಮಲಾ ಪದ್ಮನಾಭ ಶೆಟ್ಟಿ ಪ್ರಶಸ್ತಿ ಪತ್ರ ವಾಚಿಸಿದರು.

    ಕಾವೂರು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಉದ್ಯಮಿ ಕರುಣಾಕರ ಶೆಟ್ಟಿ ಪಣಿಯೂರು, ರವೀಂದ್ರ ರೈ ಕಲ್ಲಿಮಾರು, ಕೆ.ಲಕ್ಷ್ಮೀನಾರಾಯಣ ರೈ ಹರೇಕಳ, ಉಮೇಶ ಆಚಾರ್ಯ ಗೇರುಕಟ್ಟೆ, ಬೆಟ್ಟಂಪಾಡಿ ಪದ್ಮನಾಭ ಶೆಟ್ಟಿ, ಡಾ.ಸೂರಜ್ ಸುಂದರ್ ಶೆಟ್ಟಿ, ಸುಮಾಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷ ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಪ್ರಾರ್ಥಿಸಿ, ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ, ಸುಧಾಕರ ರಾವ್ ಪೇಜಾವರ ವಂದಿಸಿದರು. ಇತ್ತೀಚೆಗೆ ನಿಧನರಾದ ಕೈರಂಗಳ ನಾರಾಯಣ ಹೊಳ್ಳ ಮತ್ತು ಪಿ.ವಿ.ರಾವ್ ಪೇಜಾವರ ಅವರಿಗೆ ಯಕ್ಷಾಂಗಣ ವತಿಯಿಂದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಯಕ್ಷಗಾನ ತಾಳಮದ್ದಳೆ ಸಪ್ತಾಹದ ನಾಲ್ಕನೇ ದಿನ ‘ಶ್ರೀಹರಿ ಚರಿತ್ರೆ’ ಸರಣಿಯಲ್ಲಿ ಯುವ ಭಾಗವತ ಭರತ್ ರಾಜ್ ಶೆಟ್ಟಿ ಸಿದ್ದಕಟ್ಟೆ ಅವರ ಹಾಡುಗಾರಿಕೆಯಲ್ಲಿ ‘ಅಂಬರೀಶ ಚರಿತ್ರೆ’ ತಾಳಮದ್ದಳೆ ಜರಗಿತು.

    Share. Facebook Twitter Pinterest LinkedIn Tumblr WhatsApp Email
    Previous Articleಭಾರತೀಯ ವಿದ್ಯಾಭವನದಲ್ಲಿ ರಾಗತರಂಗ ಸಂಸ್ಥೆಯಿಂದ ಜಿಲ್ಲಾ ಮಟ್ಟದ ಸ್ಪರ್ಧೆ
    Next Article ಮರಕಡದ ಅಂಡಾಲಬೀಡಿನಲ್ಲಿ ಗಂಗಾಧರ ಶೆಟ್ಟಿಯವರಿಗೆ ಅಭಿನಂದನ ಮತ್ತು ಕವಿಗೋಷ್ಠಿ
    roovari

    Add Comment Cancel Reply


    Related Posts

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಸಮಾರೋಪಗೊಂಡ ಪುತ್ರಕಾಮೇಷ್ಠಿ ತಾಳಮದ್ದಲೆ ಸಪ್ತಾಹ

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.