Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ.ಪದ್ಮಾ ಸುಬ್ರಹ್ಮಣ್ಯಂಗೆ ಪರಂಪರಾ ವಿದ್ಯಾಪೀಠದ ‘ನಾಟ್ಯಭೂಷಣ ಪ್ರಶಸ್ತಿ’ ಪ್ರದಾನ
    Awards

    ಡಾ.ಪದ್ಮಾ ಸುಬ್ರಹ್ಮಣ್ಯಂಗೆ ಪರಂಪರಾ ವಿದ್ಯಾಪೀಠದ ‘ನಾಟ್ಯಭೂಷಣ ಪ್ರಶಸ್ತಿ’ ಪ್ರದಾನ

    November 27, 2023Updated:November 28, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಪೆರಿಯ ಆಲಕ್ಕೋಡು ಗೋಕುಲಂ ಗೋಶಾಲಾ ದೀಪಾವಳಿ ಸಂಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯವನ್ನು ವಹಿಸಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹಿರಿಯ ನೃತ್ಯ ಕಲಾವಿದೆ ಡಾ. ಪದ್ಮಾ ಸುಬ್ರಹ್ಮಣ್ಯಂ ಅವರಿಗೆ ದಿನಾಂಕ 19-11-2023 ರಂದು  ಪರಂಪರಾ ವಿದ್ಯಾಪೀಠದ ನಾಟ್ಯಭೂಷಣ ಪ್ರಶಸ್ತಿಯನ್ನು ನೀಡಿ ಆಶೀರ್ವದಿಸಿದರು.

    ಪ್ರಶಸ್ತಿಯನ್ನು ಸ್ವೀಕರಿಸಿದ ಡಾ.ಪದ್ಮಾ ಸುಬ್ರಹ್ಮಣ್ಯಂ ಮಾತನಾಡಿ, “ಕಲೆಯೇ ಸಂಸ್ಕೃತಿಯ ತಳಹದಿ. ಇಂದಿನ ಮಕ್ಕಳಲ್ಲಿ ಕಲೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ಒಳ್ಳೆಯ ಲಕ್ಷಣವಲ್ಲ ಎಂದು ತಿಳಿಸಿದರು. ಅಲ್ಲದೆ ಗೋಶಾಲೆಯಿಂದ ದೊರೆತ ಪ್ರಶಸ್ತಿ ಶ್ರೇಷ್ಠವಾದುದು ಎಂದರು. ಗೋಶಾಲೆಯ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಸಹಕರಿಸುವುದಾಗಿ ಇದೇ ವೇಳೆ ಅವರು ಭರವಸೆ ನೀಡಿದರು.

    ವಿದ್ವಾನ್ ವೆಳ್ಳಿಕೋತ್ ವಿಷ್ಣು ಭಟ್ ಅವರಿಗೆ ಗುರುರತ್ನ ಪ್ರಶಸ್ತಿ, ಗೋಕುಲ್ ಅಲಂಗೋಡ್ ಮತ್ತು ವಿಭಾ ರಾಜೀವ್‌ ಅವರಿಗೆ ಯುವ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪರಂಪರಾ ವಿದ್ಯಾಪೀಠದ ಆಚಾರ್ಯರಾದ ವಿಷ್ಣುಪ್ರಸಾದ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಅಜಿತ್ ಕುಮಾರ್ ವರ್ಮಾ, ಶಂಕರನಾರಾಯಣ ಜೋಯಿಸ್, ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಮುರಳೀಧರನ್‌ ನಂಬ್ಯಾರ್, ಖ್ಯಾತ ಸಂಸ್ಕೃತ ವಿದ್ವಾಂಸ ಕೆ.ಕಣ್ಣನ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಸುಮಾ ಶಿವಾನಂದ ದೇಸಾಯಿ ಇವರಿಗೆ ‘ರಂಗನಾಥ್ ಶರ್ಮಾ ಪ್ರಶಸ್ತಿ’ ಪ್ರದಾನ | ಡಿಸೆಂಬರ್ 3
    Next Article ಡಿಜಿ ಯಕ್ಷ ಫೌಂಡೇಶನ್ ವತಿಯಿಂದ ‘ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ’ ಪ್ರದಾನ ಮತ್ತು ‘ಯಕ್ಷನಾದೋತ್ಸವ’
    roovari

    Add Comment Cancel Reply


    Related Posts

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಪ್ರೊ. ಕು.ಶಿ. ಹರಿದಾಸ ಭಟ್ ಶತಮಾನೋತ್ಸವ ಜಾನಪದ ಪ್ರಶಸ್ತಿ ಹಾಗೂ ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರಕಟ

    June 7, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.