ಮಂಗಳೂರು : ಸಾರ್ವಜನಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2023ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಇಂಗ್ಲೀಷ್ ಹಾಗೂ ಇತರ ಭಾರತೀಯ ಭಾಷೆಗಳ ಪುಸ್ತಕಗಳ ಆಯ್ಕೆಗೆ ಲೇಖಕರು, ಲೇಖಕ- ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ, ಮಂಗಳೂರು ಕಚೇರಿಯಿಂದ ಪಡೆದು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ರಸ್ತೆ, ಬೆಂಗಳೂರು-560001 ಇಲ್ಲಿಗೆ ದಿನಾಂಕ 05-02-2024ರ ಒಳಗೆ ಸಲ್ಲಿಸಬೇಕು ಎಂದು ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.