ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯಲ್ಲಿ ಕುಮಾರವ್ಯಾಸ ಜಯಂತಿ ಕಾರ್ಯಕ್ರಮವು ದಿನಾಂಕ 13.01.2024ರಂದು ನಡೆಯಿತು.
ಮುಖ್ಯೋಪಾಧ್ಯಾಯರಾದ ಶ್ರೀ ಸುರೇಶ್ ಕೆ. ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಮಾರವ್ಯಾಸ ಭಾರತದ ಕರ್ಣ ಭೇದನದ ಗಮಕ ವಾಚನ ವ್ಯಾಖ್ಯಾನ ನಡೆಯಿತು. ಕುಮಾರಿ ನಂದನ ಮಾಲೆಂಕಿ ವಾಚನ ಮಾಡಿದರೆ, ದಕ್ಷಿಣ ಕನ್ನಡ ಜಿಲ್ಲಾ ಗಮಕ ಕಲಾ ಪರಿಷತ್ ಅಧ್ಯಕ್ಷ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನವನ್ನು ಮಾಡಿದರು.

