ಸುರತ್ಕಲ್ : ಬೆಂಗಳೂರಿನ ವೀರಲೋಕ ಪ್ರಕಾಶನ, ಸುರತ್ಕಲ್ಲಿನ ಗೋವಿಂದದಾಸ ಕಾಲೇಜು ಮತ್ತು ಉಡುಪಿ ಲೇಖಕಿಯರ ಮತ್ತು ವಾಚಕಿಯರ ಸಂಘ ಇವುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ‘ದೇಸಿ ಕಥಾ ಕಮ್ಮಟ’ವು ದಿನಾಂಕ 03-02-2024 ಮತ್ತು 04-02-2024ರಂದು ಗೋವಿಂದದಾಸ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲೆಯ ಯುವ ಕಥೆಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಮ್ಮಟವನ್ನು ಆಯೋಜಿಸಲಾಗಿದೆ. ಭಾಗವಹಿಸುವವರಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಕಮ್ಮಟದಲ್ಲಿ ಭಾಗವಹಿಸಲು ಮೊದಲು ನೋಂದಾಯಿಸಿದ 40 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಆಸಕ್ತರು ಲೇಖಕಿಯರು ಮತ್ತು ವಾಚಕರ ಸಂಘ, ಉಡುಪಿ ಮತ್ತು ಗೋವಿಂದ ದಾಸ ಕಾಲೇಜಿನ ಕನ್ನಡ ವಿಭಾಗದ ಡಾ. ಸಂತೋಷ್ ಆಳ್ವ ಅವರನ್ನು ಸಂಪರ್ಕಿಸಬಹುದಾಗಿದೆ. ಕಮ್ಮಟದಲ್ಲಿ ಭಾಗವಹಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗುವುದು.