ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ನಡೆಯುವ ತಿಂಗಳ ಸರಣಿ ತಾಳಮದ್ದಳೆ ಕಾರ್ಯಕ್ರಮ ದಿನಾಂಕ 05-01-2024ರಂದು ನಡೆಯಿತು. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಾರ್ತಿಸುಬ್ಬ ವಿರಚಿತ ‘ವಾಲಿ ಮೋಕ್ಷ’ ಪ್ರಸಂಗದ ತಾಳಮದ್ದಳೆ ನಡೆಯಿತು.
ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ಸರ್ವಶ್ರೀ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಸತೀಶ್ ಇರ್ದೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಪ್ರೊ. ದಂಬೆ ಈಶ್ವರ ಶಾಸ್ತ್ರೀ, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ ಮತ್ತು ಮಾ.ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಪೂಕಳ ಲಕ್ಷ್ಮೀ ನಾರಾಯಣ ಭಟ್ ಮತ್ತು ಶ್ರೀಮತಿ ಶುಭಾ ಅಡಿಗ (ಶ್ರೀ ರಾಮ), ಗುಂಡ್ಯಡ್ಕ ಶ್ರೀ ಈಶ್ವರ ಭಟ್ (ವಾಲಿ), ಶ್ರೀ ಗುಡ್ಡಪ್ಪ ಬಲ್ಯ ಮತ್ತು ಶ್ರೀಮತಿ ಜಯಂತಿ ಹೆಬ್ಬಾರ್ (ಸುಗ್ರೀವ), ಶ್ರೀ ಭಾಸ್ಕರ ಬಾರ್ಯ (ಲಕ್ಷ್ಮಣ), ಮಾಂಬಾಡಿ ಶ್ರೀ ವೇಣುಗೋಪಾಲ್ ಭಟ್ (ತಾರೆ) ಪಾತ್ರದಲ್ಲಿ ಸಹಕರಿಸಿದರು. ಸಂಘದ ನಿರ್ದೇಶಕ ಶ್ರೀ ಭಾಸ್ಕರ ಬಾರ್ಯ ಸ್ವಾಗತಿಸಿ, ಗೌರವ ಕಾರ್ಯದರ್ಶಿ ರಂಗನಾಥ್ ರಾವ್ ವಂದಿಸಿದರು.