ಮಂಗಳೂರು : ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮತ್ತು ಸಂತ ಆಲೋಶಿಯಸ್ ರಂಗ ಅಧ್ಯಯನ ಕೇಂದ್ರ ಕನ್ನಡ ವಿಭಾಗ ಸಹಯೋಗದೊಂದಿಗೆ ಶಶಿರಾಜ್ ರಾವ್ ಕಾವೂರು ಬರೆದ ‘ಪರಶುರಾಮ’ ಮತ್ತು ‘ಛತ್ರಪತಿ ಶಿವಾಜಿ’ ಎರಡು ಕನ್ನಡ ನಾಟಕಗಳ ಲೋಕಾರ್ಪಣೆ ಸಮಾರಂಭವು ದಿನಾಂಕ 14-02-2024ರಂದು ಸಂಜೆ 5 ಗಂಟೆಗೆ ಸಂತ ಆಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ. ಬ್ಲಾಕ್, ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ನಡೆಯಲಿದೆ.
ಈ ಸಮಾರಂಭದಲ್ಲಿ ಶ್ರೀ ಜಗದ್ಗುರು ದುರದುಂಡೇಶ್ವರ ಮಠ ನಿಡಸೋಸಿಯ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಅಶೀರ್ವಚನ ನೀಡಲಿದ್ದಾರೆ. ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್, ನಟ ಡಾ. ದೇವದಾಸ್ ಕಾಪಿಕಾಡ್, ಯಕ್ಷರಂಗಾಯಣದ ನಿಕಟಪೂರ್ವ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಮತ್ತು ಡಾ. ನಾ. ದಾಮೋದರ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮೆಗಾಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಇವರಿಂದ ಮೈಂಡ್ ಮ್ಯಾಜಿಕ್ ಮತ್ತು ಮೂಡಬಿದಿರೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಅಭಿನಯದ ಡಾ. ಜೀವನ್‌ರಾಮ್ ಸುಳ್ಯ ನಿರ್ದೇಶನದಲ್ಲಿ ‘ಏಕಾದಶಾನನ’ ಎಂಬ ಕಿರು ನಾಟಕ ಪ್ರದರ್ಶನ ಹಾಗೂ ಪುಸ್ತಕ ಪ್ರದರ್ಶನ, ವಾಚನ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ. ಬನ್ನಿ ಪುಸ್ತಕಪ್ರೇಮಿಗಳ ದಿನಾಚರಣೆ ಆಚರಿಸಿ ಸಂಭ್ರಮಿಸೋಣ.