Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸುಮನಸಾ ಕೊಡವೂರು” ಸಂಸ್ಥೆಯ ರಂಗಹಬ್ಬದ 5ನೇ ದಿನದ ಕಾರ್ಯಕ್ರಮದಲ್ಲಿ ಶಾಸಕ ಯಶಪಾಲ್‌ ಸುವರ್ಣ
    Drama

    ಸುಮನಸಾ ಕೊಡವೂರು” ಸಂಸ್ಥೆಯ ರಂಗಹಬ್ಬದ 5ನೇ ದಿನದ ಕಾರ್ಯಕ್ರಮದಲ್ಲಿ ಶಾಸಕ ಯಶಪಾಲ್‌ ಸುವರ್ಣ

    March 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬದ 5ನೇ ದಿನದ ಕಾರ್ಯಕ್ರಮವು ದಿನಾಂಕ 29-02-2024ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯಶಪಾಲ್ ಸುವರ್ಣ “ವಿ.ಎಸ್‌. ಆಚಾರ್ಯರ ಕಲ್ಪನೆಯಲ್ಲಿ ಭುಜಂಗ ಪಾರ್ಕ್‌ನಲ್ಲಿ ಬಯಲು ರಂಗಮಂದಿರ ನಿರ್ಮಾಣಗೊಂಡಿತ್ತು. ಆದರೆ, ಈ ಬಯಲು ರಂಗಮಂದಿರವನ್ನು ಸುಮನಸಾ ಸಂಸ್ಥೆ ಬಿಟ್ಟು ಬೇರೆಯವರು ಬಳಸದೇ ಇರುವುದು ಬೇಸರದ ಸಂಗತಿ. ಸುಮನಸಾವು ಅನೇಕ ಪ್ರತಿಭೆಗಳನ್ನು ಬೆಳಕಿಗೆ ತಂದಿದ್ದು, ರಾಜ್ಯದೆಲ್ಲೆಡೆ ಇಲ್ಲಿನ ಪ್ರತಿಭೆಗಳು ಬೆಳಗುತ್ತಿವೆ. ನಾಟಕಗಳ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಹರಡುವ ಕೆಲಸಗಳಾಗುತ್ತಿವೆ” ಎಂದು ಹೇಳಿದರು.

    ಉದ್ಯಮಿ ಅಚ್ಯುತ್‌ ಅಮೀನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, “ಸಮಾಜದ ಮತ್ತು ನಮ್ಮ ಸಂಸ್ಕೃತಿಯ ಪ್ರತಿಬಿಂಬವೇ ರಂಗಭೂಮಿ. ಅದರಂತೆ ಸುಮನಸಾ ಕಾರ್ಯನಿರ್ವಹಿಸುತ್ತಿದ್ದು, ಸಾಂಸ್ಕೃತಿಕ ಮಾತ್ರವಲ್ಲ, ಸಾಮಾಜಿಕ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದೆ. ನಟರು, ನಿರ್ದೇಶಕರು ಉತ್ತಮ ಸಾಧನೆ ಮಾಡಿ, ಅದು ಪ್ರೇಕ್ಷಕರಿಗೆ ತಲುಪಿದರೆ ರಂಗಭೂಮಿ ಯಶಸ್ವಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರಂಗಭೂಮಿ ಅತ್ಯಂತ ಪ್ರಗತಿ ಪಥದಲ್ಲಿ ಸಾಗುತ್ತಿದೆ” ಎಂದು ಶ್ಲಾಘಿಸಿದರು.

    ಸಮನ್ವಯ ಸರ್ವಧರ್ಮ ಸಮಿತಿ ಅಧ್ಯಕ್ಷ ರಮೇಶ್‌ ತಿಂಗಳಾಯ ಮಾತನಾಡಿ, “ಆಧುನಿಕ ಕಾಲದಲ್ಲಿ ಎಲ್ಲರ ಕೈಯಲ್ಲಿ ಮೊಬೈಲ್‌ ಇದೆ. ಎಲ್ಲವನ್ನೂ ಮೊಬೈಲ್‌ನಲ್ಲಿಯೇ ನೋಡುತ್ತಾರೆ. ಆದರೆ, ರಂಗಭೂಮಿ ನೀಡುವ ಸಂದೇಶ ಅವುಗಳಲ್ಲಿ ಸಿಗುವುದಿಲ್ಲ” ಎಂದು ತಿಳಿಸಿದರು.

    ಕಲಾವಿದ ಪಾಂಡುರಂಗ ಪ್ರಭು ಪರ್ಕಳ ಅವರಿಗೆ ‘ರಂಗಸಾಧಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಧುಕರ್‌ ಎಂಜಿನಿಯರಿಂಗ್‌ ವರ್ಕ್ಸ್‌ ಮಾಲೀಕ ಮಂಜುನಾಥ್‌ ಜತ್ತನ್‌, ಉದ್ಯಮಿ ಗುರುವ ಸುವರ್ಣ, ಉದ್ಯಮಿ ಮಹಾಬಲ ಸಾಲ್ಯಾನ್‌, ಪೌರಾಯುಕ್ತ ರಾಯಪ್ಪ, ರಾಷ್ಟ್ರೀಯ ಬಿಲ್ಲವ ಮಹಾಮಂಡಳ ಉಡುಪಿ ಇದರ ಅಧ್ಯಕ್ಷ ಚಂದ್ರಶೇಖರ ಕಾಪು, ಸುಮನಸಾ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಪ್ರವೀಣ್‌ ಜಿ. ಕೊಡವೂರು, ಹರೀಶ್‌ ಅಂಬಲಪಾಡಿ ಉಪಸ್ಥಿತರಿದ್ದರು. ನಾಗೇಶ್ ಸ್ವಾಗತಿಸಿ, ಪ್ರವೀಣ್‌ಚಂದ್ರ ಕಾರ್ಯಕ್ರಮ ನಿರೂಪಿಸಿ, ದಿವಾಕರ ಕಟೀಲು ವಂದಿಸಿದರು. ‘ನಮ ತುಳುವೆರ್‌ ಸಂಘಟನೆ’ ತಂಡದಿಂದ ‘ಅಂಬೆ’ ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂಗ್ಯಾಬಾಳ್ಯಾ’ ನಾಟಕ ಪ್ರದರ್ಶನ | ಮಾರ್ಚ್ 2
    Next Article ಶಿವಮೊಗ್ಗದಲ್ಲಿ ‘ಅನುರಕ್ತೆ’ ಏಕವ್ಯಕ್ತಿ ರಂಗ ಪ್ರಯೋಗ | ಮಾರ್ಚ್ 8
    roovari

    Add Comment Cancel Reply


    Related Posts

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026

    ಉಡುಪಿಯಲ್ಲಿ ಉದ್ಘಾಟನೆಗೊಂಡ ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’

    February 26, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ರಂಗ ವಿಮರ್ಶೆ | ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು

    February 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.