ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕಥಾಬಿಂದು ಪ್ರಕಾಶನ ಇದರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಭವನ ಬಯಲು ರಂಗಮಂಟಪದಲ್ಲಿ ‘ಕೇರಳ-ಕರ್ನಾಟಕ ಕನ್ನಡ ಸಂಸ್ಕೃತಿ ಉತ್ಸವ’ವು ದಿನಾಂಕ 10-03-2024ರಂದು ನಡೆಯಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು ಮಾತನಾಡಿ “ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ ಸಂವರ್ಧನೆಗೆ ಇಲ್ಲಿನ ಸಂಘ ಸಂಸ್ಥೆಗಳ ಪಾತ್ರ ಹಿರಿದು” ಎಂದು ಹೇಳಿದರು.
ಸಮಾರಂಭವನ್ನು ಪಿ.ವಿ. ಪ್ರದೀಪ್ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ವಿ.ಬಿ. ಕುಳಮರ್ವ, ಕರ್ನಾಟಕ ಜಾನಪದ ಪರಿಷತ್ ಕೇರಳ ರಾಜ್ಯ ಘಟಕ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ, ಸಾಹಿತಿ ಕೊಳ್ಚಪ್ಪೆ ಗೋವಿಂದ ಭಟ್, ಸಂಧ್ಯಾರಾಣಿ ಟೀಚರ್, ಪ್ರೊ. ಎ. ಶ್ರೀನಾಥ್ ಕಾಸರಗೋಡು, ಸಾಹಿತಿ ಬಿ. ಸತ್ಯವತಿ ಭಟ್, ಧಾರ್ಮಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಉಪಸ್ಥಿತರಿದ್ದರು. ಕೃತಿ ಬಿಡುಗಡೆ, ವಿವಿಧ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕನ್ನಡ ಭವನ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿ, ವಂದಿಸಿದರು.