ಸುರತ್ಕಲ್ : ಸುರತ್ಕಲ್ಲಿನ ಗೋವಿಂದದಾಸ ಕಾಲೇಜಿನ ರೋಟರಾಕ್ಟ್ ಕ್ಲಬ್, ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಆಡಳಿತ ಶಾಸ್ತ್ರ ವಿಭಾಗ ಹಾಗೂ ರೋಟರಿ ಕ್ಲಬ್ ಸುರತ್ಕಲ್ ಇದರ ಆಶ್ರಯದಲ್ಲಿ ‘ಮೈಂಡ್ ಮ್ಯಾಜಿಕ್’ ವಿಶೇಷ ಕಾರ್ಯಕ್ರಮವು ದಿನಾಂಕ 17-04-2024ರಂದು ಸುರತ್ಕಲ್ಲಿನ ಗೋವಿಂದದಾಸ ಕಾಲೇಜಿನಲ್ಲಿರುವ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿಭಾಗವಹಿಸಿದ ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ಮಾತನಾಡಿ “ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಏಕಾಗ್ರತೆ ಅತ್ಯಗತ್ಯವಾಗಿದ್ದು ಸರಳ ತಂತ್ರಗಳ ಮೂಲಕ ಮನಸ್ಸಿನ ಏಕಾಗ್ರತೆ ಮತ್ತು ದೃಢತೆಯನ್ನು ಹೆಚ್ಚಿಸಿಕೊಳ್ಳಬಹುದು.” ಎಂದರು. ಮತ್ತು ವಿದ್ಯಾರ್ಥಿಗಳು ಏಕಾಗ್ರತೆಯನ್ನು ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ತಂತ್ರಗಳನ್ನು ಸರಳವಾದ ಜಾದೂಗಳ ಹಿನ್ನಲೆಯಲ್ಲಿ ಪ್ರಸ್ತುತ ಪಡಿಸಿದರು.
ಸುರತ್ಕಲ್ ರೋಟರಿ ಕ್ಲಬ್ಬಿನ ಅಧ್ಯಕ್ಷ ರೋ. ಯೋಗೀಶ್ ಕುಳಾಯಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ “ಮನಸ್ಸಿನ ಏಕಾಗ್ರತೆಯ ವಿಧಾನಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಕಲಿಕೆಯಲ್ಲಿ ಸಾಕರಾತ್ಮಕ ಫಲಿತಾಂಶಗಳನ್ನು ಪಡೆಯಬಹುದು.” ಎಂದರು.
ಕಾರ್ಯಕ್ರಮದಲ್ಲಿ ಉಪ ಪ್ರಾಚಾರ್ಯ ಪ್ರೊ. ನೀಲಪ್ಪ ವಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯ ಪ್ರವೀಣ್ ಕೆ., ರೋಟರಾಕ್ಟ್ ಕ್ಲಬ್ ಸಂಯೋಜಕಿ ಶಿಲ್ಪಾರಾಣಿ ಕೆ., ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘದ ಸಂಯೋಜಕಿ ಡಾ. ಭಾಗ್ಯಲಕ್ಷ್ಮೀ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀದೇವಿ, ರೋಟರಾಕ್ಟ್ ಕ್ಲಬ್ಬಿನ ಅಧ್ಯಕ್ಷೆ ದಿಶಾ, ಸುರತ್ಕಲ್ ರೋಟರಿ ಕ್ಲಬ್ಬಿನ ಕಾರ್ಯದರ್ಶಿ ರಮೇಶ್ ರಾವ್ ಎಂ. ಮತ್ತು ನಿರ್ದೇಶಕ ಮೋಹನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಲ್ಲವಿ ಅತಿಥಿಗಳನ್ನು ಸ್ವಾಗತಿಸಿ, ನಿರೂಪಿಸಿ, ಹಿತಾ ಉಮೇಶ್ ವಂದಿಸಿದರು.