ಕಲಬುರಗಿ : 2013ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪ್ರಶಸ್ತಿ ಪುರಸ್ಕೃತ, ಪ್ರತಿಭಾವಂತ ಕವಿ ಹಾಗೂ ಕೇಂದ್ರೀಯ ವಿವಿಯ ಕನ್ನಡ ಸಂಶೋಧನಾ ವಿದ್ಯಾರ್ಥಿ ಆನಂದ ದಿನಾಂಕ 20-05-2024ರಂದು ವಿಧಿವಶರಾದರು.
ಕೋಲಾರ ಮೂಲದ ವಿದ್ಯಾರ್ಥಿ ಆನಂದ್ ಲಕ್ಕೂರ್ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಪಿ. ಎಚ್. ಡಿ. ಅಧ್ಯಯನ ಮಾಡುತ್ತಿದ್ದ ಆನಂದ ಲಕ್ಕೂರ್ ಒಳ್ಳೆಯ ಬರಹ ಗಾರರಾಗಿದ್ದರು.
44 ವರ್ಷ ಪ್ರಾಯದ ಆನಂದ್ ಲಕ್ಕೂರ್ ದಲಿತ- ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕರಾಗಿದ್ದರು. ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ರಚಿಸಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸಿದ್ದಾರೆ.
ಇತ್ತೀಚೆಗೆ ತೆಲುಗು ಭಾಷೆಯಿಂದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ. 2013ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ ಪ್ರಶಸ್ತಿ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು. ನಿಂ. ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ. ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಆನಂದ ಅವರಿಗೆ ಸಂದಿದೆ.