ಕಾಸರಗೋಡು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಕಾಸರಗೋಡು ಹಾಗೂ ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ದಿನಾಂಕ 11-06-2024ರಂದು ಬೆಳಗ್ಗೆ 10-00 ಗಂಟೆಗೆ ಕಯ್ಯಾರಿನ ಶ್ರೀ ರಾಮಕೃಷ್ಣ ಎ.ಎಲ್.ಪಿ. ಶಾಲೆಯಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ ಜನ್ಮ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಕಾಸರಗೋಡು ಇದರ ಸಂಸ್ಥಾಪಕ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಉದ್ಘಾಟಿಸುವರು. ಕನ್ನಡ ಏಕೀಕರಣ ಹೋರಾಟಗಾರ್ತಿ ಆಯಿಷಾ ಎ.ಎ. ಪೆರ್ಲ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಪ್ರಶಸ್ತಿ ಪ್ರದಾನ ಮಾಡಲಿರುವರು.
ಅತಿಥಿಗಳಾಗಿ ಪೈವಳಿಕೆ ಗ್ರಾ.ಪಂ. ಅಧ್ಯಕ್ಷೆ ಜಯಂತಿ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಫಾತಿಮತ್ ಝೌರ, ಕ.ಗ.ಪ್ರ.ಅ.ಪ್ರಾ. ದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಶ್ರೀಧರ ಹೊಳ್ಳ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ, ಮಂಜೇಶ್ವರ ಉಪ ಜಿಲ್ಲಾ ಪ್ರಭಾರ ವಿದ್ಯಾಧಿಕಾರಿ ಜೀತೇಂದ್ರ ಎಸ್.ಎಚ್. ಪಾಲ್ಗೊಳ್ಳಲಿರುವರು. ಸಾಹಿತ್ಯ ಸಂಘಟಕ ಪ್ರೊ. ಎ. ಶ್ರೀನಾಥ್, ಸಮಾಜ ಸೇವಕರಾದ ಪ್ರಸಾದ್ ರೈ ಕಯ್ಯಾರು, ಮೋಹನ್ ರೈ ಕಯ್ಯಾರು, ಮುಖ್ಯೋಪಾಧ್ಯಾಯಿನಿ ಪ್ರೇಮಲತಾ, ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ದೀಪಕ್ ಶರ್ಮಾ ಉಪಸ್ಥಿತರಿರುವರು.