ಕುಶಾಲನಗರ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ. ಸಾ. ಪ.), ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹೆಬ್ಬಾಲೆ ವಲಯ ಕ. ಸಾ. ಪ. ಘಟಕ ಹಾಗೂ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಭಾಷಾ ಸಂಘದ ಸಂಯುಕ್ತಾಶ್ರಯದಲ್ಲಿ ಬಿ. ಜಿ. ರಘುನಾಥನಾಯಕ್ ದತ್ತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 11-06-2024 ರಂದು ನಡೆಯಿತು.
ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆ ಹಾಗೂ ಕ. ಸಾ. ಪ. ಅಧ್ಯಕ್ಷರುಗಳು ಕುರಿತು ನಡೆದ ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ. ಜಿ. ಪ್ರೇಮಕುಮಾರ್ ಮಾತನಾಡಿ “ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವುದು ಮತ್ತು ಅವರನ್ನು ಉತ್ತಮ ಸತ್ಪಜೆಗಳನ್ನಾಗಿ ರೂಪಿಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ಉದ್ದೇಶವಾಗಿದೆ. ಮಕ್ಕಳು ಕಲೆ, ಸಾಹಿತ್ಯ, ವಿಜ್ಞಾನದ ಪುಸ್ತಕಗಳನ್ನು ಓದುವ ಪ್ರವೃತ್ತಿಯೊಂದಿಗೆ ಬರವಣಿಗೆಯ ಕೌಶಲ್ಯ ಬೆಳೆಸಿಕೊಂಡು ಜ್ಞಾನವಂತರಾಗಬೇಕು. ನಾಡಿನ ಸಾಹಿತಿಗಳ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಕೊಂಡೊಯ್ಯುವ ಮಹತ್ತರ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯ.” ಎಂದು ಸಲಹೆ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯ ಎಂ. ಎನ್. ವೆಂಕಟನಾಯಕ್, ಶಾಲಾ ಮುಖ್ಯ ಶಿಕ್ಷಕ ಬಸವರಾಜಶೆಟ್ಟಿ, ಕ. ಸಾ. ಪ. ತಾಲ್ಲೂಕು ಗೌರವ ಕೋಶಾಧಿಕಾರಿ ಕೆ. ವಿ. ಉಮೇಶ್, ಪದಾಧಿಕಾರಿ ಡಿ. ಆರ್. ಸೋಮಶೇಖರ್, ಕ. ಸಾ. ಪ. ಸದಸ್ಯರಾದ ಎಚ್. ಪಿ. ಉದಯ್ ಕುಮಾರ್, ಟಿ. ಎಸ್. ಶಾಂಭ ಶಿವಮೂರ್ತಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬಿ. ಜಿ. ರಘುನಾಥನಾಯಕ್ ದತ್ತಿ ಉಪನ್ಯಾಸ ಕಾರ್ಯಕ್ರಮ
No Comments1 Min Read
Next Article ಮಸ್ಕತ್‌ನಲ್ಲಿ ಶ್ರೀದೇವಿ ಮಹಾತ್ಮೆ…