ಮಂಗಳೂರು : ಅಮೃತ ಪ್ರಕಾಶ ಪತ್ರಿಕೆಯ ಸಾರಥ್ಯದಲ್ಲಿ ವಿಜಯ ಬ್ಯಾಂಕ್ ನ ನಿವೃತ್ತ ಮುಖ್ಯ ಪ್ರಬಂಧಕರಾದ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿಯವರ ‘ಪ್ರಕೃತಿಯೇ ಮಹಾಮಾತೆ’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 27-06-2024ರಂದು ಮಧ್ಯಾಹ್ನ 12-00 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.
ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈ ಇವರ ಅಧ್ಯಕ್ಷತೆಯಲ್ಲಿ ವಿಶ್ರಾಂತ ಪ್ರಾಂಶುಪಾಲರು ಮತ್ತು ನಿರ್ದೇಶಕರಾದ ಡಾ. ದೇವರಾಜ್ ಇವರು ಕೃತಿ ಲೋಕಾರ್ಪಣೆ ಮಾಡಲಿರುವರು. ವಿಕಾಸ ಸೇವಾ ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಸಮಾಜ ಸೇವಕರಾದ ಶ್ರೀ ಸದಾನಂದ ಉಪಾಧ್ಯಾಯ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.