ಕೊಡಗು : ಸುವರ್ಣ ಕರ್ನಾಟಕ 50ರ ಸಂಭ್ರಮದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಅರಮೇರಿ ಕಳಂಚೇರಿ ಮಠ ಮತ್ತು ಎಸ್.ಎಂ.ಎಸ್. ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಆರೋಢ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ. ಮಾಗನೂರು ಬಸಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ದಾವಣಗೆರೆಯ ಶ್ರೀಮತಿ ಸುನಂದಾದೇವಿ ಮತ್ತು ಸಂಗಮೇಶ್ವರ ಗೌಡ ಇವರು ಶರಣ ತತ್ವ ಪ್ರಚಾರ ಮತ್ತು ಶರಣ ವಿಚಾರಗಳನ್ನು ತಿಳಿಯಪಡಿಸುವುದ್ದಕೋಸ್ಕರ ಸ್ಥಾಪಿಸಿರುವ ದತ್ತಿ ಕಾರ್ಯಕ್ರಮವು ದಿನಾಂಕ 27-06-2024ರಂದು ಮಧ್ಯಾಹ್ನ 1-00 ಗಂಟೆಗೆ ಅರಮೇರಿ ಕಳಚೇರಿ ಮಠದ ಎಸ್.ಎಂ.ಎಸ್. ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ದಿವ್ಯಸಾನಿದ್ಯವನ್ನು ಅರಮೆರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ವಹಿಸಲಿದ್ದು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ವಿ. ಶಿವಪ್ಪ ನೆರವೇರಿಸಲಿದ್ದಾರೆ. ದತ್ತಿ ಮತ್ತು ಕಾರ್ಯಕ್ರಮದ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹಮದ್ ರವರು ಪ್ರಾಸ್ತಾವಿಕ ಮಾತುಗಳನಾಡಲ್ಲಿದ್ದಾರೆ. ‘ಕನ್ನಡ ಭಾಷೆಯ ಬೆಳವಣಿಗೆಗೆ ಶರಣು ಶರಣರು ನೀಡಿರುವ ಕೊಡುಗೆ’ಯ ಕುರಿತು ವಿರಾಜಪೇಟೆಯ ಸಂತ ಅನ್ನಮ್ಮ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಪ್ರತಿಮಾ ರೈ ಉಪನ್ಯಾಸ ನೀಡಲಿದಿದ್ದಾರೆ.
ದತ್ತಿಯ ಆಶಯದಂತೆ ಶರಣ ತತ್ವ ಪ್ರಚಾರಕರಾದ ಶ್ರೀ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ಸನ್ಮಾನಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಮಾಗನೂರು ಬಸಪ್ಪ ಪಬ್ಲಿಕ್ ಪ್ರೆಸ್ಟಿನ ಗೌರವ ಕಾರ್ಯದರ್ಶಿಗಳಾದ ಎಂ.ಬಿ. ಸಂಗಮೇಶ್ವರ ಗೌಡ ಮತ್ತು ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ, ಶ್ರೀಮತಿ ರೇವತಿ ರಮೇಶ್ ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್ ಮತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ರಾಜೇಶ್ ಪದ್ಮನಾಭ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.