Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಉದ್ಘಾಟನೆ
    Cultural

    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಉದ್ಘಾಟನೆ

    June 26, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನಾ ಸಮಾರಂಭವು ದಿನಾಂಕ 24-06-2024 ರಂದು ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿದ್ಯಾ ಎಸ್. ಮಾತನಾಡಿ “ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಪಠ್ಯಕ್ಕೆ ಕೊಡುವಷ್ಟೇ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕಾಗುತ್ತದೆ. ಆದುದರಿಂದ ಶಾಲಾ ಕಾಲೇಜುಗಳು ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕಲಾ ವಿಭಾಗವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಬದುಕುವ ಕಲೆಯನ್ನು ಕರಗತಗೊಳಿಸುತ್ತದೆ. ಪಠ್ಯದ ಜತೆಗೆ ತಮ್ಮ ಆಸಕ್ತ ವಿಷಯಗಳನ್ನು ಅಧ್ಯಯನ ಮಾಡುವುದರ ಮೂಲಕ ಒಂದು ಚೌಕಟ್ಟಿಗೆ ಸೀಮಿತವಾಗದೆ ಅವಕಾಶಗಳ ಬೆನ್ನುಹತ್ತಿ ಜೀವನದಲ್ಲಿ ಸಫಲರಾಗಬೇಕು.” ಎಂದು ಕಿವಿಮಾತನ್ನು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ ಮಾತನಾಡಿ “ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯವನ್ನು ಹೆಚ್ಚಿಸುವ ಹಲವು ಕಾರ್ಯಚಟುವಟಿಕೆಗಳ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಇದರಲ್ಲಿ ಸಂಪೂರ್ಣ ಆಸಕ್ತಿಯಿಂದ ತಮ್ಮನ್ನು ತಾವು ತೊಡಗಿಸಿಕೊಳ್ಳುಬೇಕು.” ಎಂದು ಪ್ರೇರೇಪಿಸಿದರು.

    ಬಳಿಕ ಕಳೆದ ಶೈಕ್ಷಣಿಕ ವರ್ಷದ ಕಲಾ ವಿಭಾಗದ ಸಾಧಕ ವಿದ್ಯಾರ್ಥಿಗಳ ಜತೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ದೇವಿಚರಣ್‌ ರೈ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಕಾರ್ಯಕ್ರಮದ ಆರಂಭದಲ್ಲಿ  ದ್ವಿತೀಯ ಪಿ. ಯು. ಸಿ. ಕಲಾ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಕಲಾ ಸಂಘದ ಕಾರ್ಯದರ್ಶಿ ಯುಕ್ತಶ್ರೀ ಸ್ವಾಗತಿಸಿ, ದ್ವಿತೀಯ ಪಿ. ಯು. ಸಿ. ಕಲಾ ವಿಭಾಗದ ವಿದ್ಯಾರ್ಥಿನಿ ತೃಪ್ತಿ ಎ. ಕೆ. ಕಾರ್ಯಕ್ರಮವನ್ನು ನಿರೂಪಿಸಿ, ಪ್ರಥಮ ಪಿ. ಯು. ಸಿ. ಕಲಾ ವಿಭಾಗದ ವಿದ್ಯಾರ್ಥಿನಿ ಬಿಂದು ಕೆ. ಜೆ. ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ನಾಟ್ಯಶಾಸ್ತ್ರದ ಪಾಠ’ 7 ದಿನಗಳ ರಂಗ ಶಿಬಿರ | ಜುಲೈ 1
    Next Article ಕನ್ನಡ ಸಾಹಿತ್ಯ ಪರಿಷತ್ತಿನ ‘ಚಾವುಂಡರಾಯ ದತ್ತಿ ಪ್ರಶಸ್ತಿ’ ಪ್ರದಾನ | ಜೂನ್ 28
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.