Subscribe to Updates

    Get the latest creative news from FooBar about art, design and business.

    What's Hot

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ 
    Yakshagana

    ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ 

    July 12, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಉಜಿರೆ ಆಯೋಜಿಸಿದ್ದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ ದಿನಾಂಕ 07-07-2024ರಂದು ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾಭವನದಲ್ಲಿ ನಡೆಯಿತು. 

    ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ “ಯಕ್ಷಗಾನ ಬಯಲಾಟಗಳು ಮನಸ್ಸಿಗೆ ಮೋದವನ್ನು ನೀಡಿದರೆ, ತಾಳಮದ್ದಳೆಯು ಬುದ್ದಿಗೆ ಗ್ರಾಸವನ್ನು ಒದಗಿಸುತ್ತದೆ. ಭಾಷಾಶುದ್ಧತೆ, ಪುರಾಣ ಜ್ಞಾನ, ಅಂದವಾಗಿ ಮಾತನಾಡುವ ಶಕ್ತಿ, ಗ್ರಹಿಕಾ  ಸಾಮರ್ಥ್ಯ ಮತ್ತು ಬದುಕಿಗೆ ಬೇಕಾದ ಸಂದೇಶಗಳನ್ನು ಯಕ್ಷಗಾನವು ಒದಗಿಸುತ್ತದೆ. ಅಕ್ಷರಾಭ್ಯಾಸ ಇಲ್ಲದವರೂ ಆಟ-ಕೂಟಗಳನ್ನು ನೋಡಿಯೇ ಪುರಾಣ ಜ್ಞಾನವನ್ನು ಪಡೆದವರಿದ್ದಾರೆ. ಅದು ಯಕ್ಷಗಾನದ ಶಕ್ತಿ. ಎಡನೀರು ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭದಲ್ಲಿ ಹಿಂದಿನಿಂದಲೂ ತಾಳಮದ್ದಳೆಯು ಆರಾಧನೆಯ ರೂಪದಲ್ಲಿ ನಡೆಯುತ್ತದೆ.” ಎಂದರು. 

    ಈ ಸಂದರ್ಭದಲ್ಲಿ ಪದ್ಯಾಣ ಮನೆತನದ ಹಿರಿಯ ಪುಟ್ಟು ನಾರಾಯಣ ಭಾಗವತರ ಸ್ಮೃತಿಯಲ್ಲಿ ನೀಡುವ ‘ಪದ್ಯಾಣ ಪ್ರಶಸ್ತಿ’ಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ಯನ್ನು ಹಿರಿಯ ಹಿಮ್ಮೇಳ ವಾದಕರಾದ ಧರ್ಮಸ್ಥಳದ ಬಿ. ಸೀತಾರಾಮ ತೋಳ್ಪಡಿತ್ತಾಯರಿಗೆ ಶ್ರೀಗಳು ಪ್ರದಾನಿಸಿದರು. ‘ಕುರಿಯ ಸ್ಮೃತಿ’ ಗೌರವವನ್ನು ಯಕ್ಷಗಾನ ಅರ್ಥದಾರಿಗಳಾದ ಕೆ. ಭಾಸ್ಕರ ರಾವ್ ಹಾಗೂ ಭಾಸ್ಕರ ನೂರಿತ್ತಾಯ ಬಾರ್ಯ ಇವರಿಗೆ ನೀಡಲಾಯಿತು. ಪುತ್ತೂರು ಮುಳಿಯ ಜ್ಯುವೆಲ್ಲರ್ಸ್ ಇದರ ಆಡಳಿತ ನಿರ್ದೇಶಕರಾದ ಮುಳಿಯ ಕೇಶವ ಪ್ರಸಾದ್ ಹಾಗೂ  ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಷಿಯವರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಗೌರವಿಸಿದರು. ಶ್ರೀಮತಿ ಶೀಲಾ ಗಣಪತಿ ಭಟ್ ಉಪಸ್ಥಿತರಿದ್ದರು. 

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ. ಟಿ.ಶ್ಯಾಮ ಭಟ್ ಮಾತನಾಡಿ “ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರು ಕಾಲಮಿತಿ ಪ್ರದರ್ಶನವನ್ನು ಯಶಸ್ವಿಯಾಗಿ ನಿಭಾಯಿಸಿದವರು. ಪದ್ಯಾಣ ಮತ್ತು ಕುರಿಯ ಮನೆತನಗಳಯಕ್ಷಗಾನೀಯ ಕೊಡುಗೆಗಳಲ್ಲಿ ಸಮರ್ಪಣಾ ಭಾವವಿರುವುದನ್ನು ಕಾಣಬಹುದು.” ಎಂದರು.

    ಕುರಿಯ ವಿಠಲ ಶಾಸ್ತ್ರಿ  ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ ಸಂಮಾನಿತರನ್ನು ನುಡಿಹಾರಗಳ ಮೂಲಕ ಅಲಂಕರಿಸಿದರು. ತಾಳಮದ್ದಳೆ ಸಪ್ತಾಹದುದ್ದಕ್ಕೂ ಭಾಗವತ ಪದ್ಯಾಣ ಗಣಪತಿ ಭಟ್ಟರ ಸ್ಮೃತಿಯನ್ನು ಮಾಡಲಾಗಿತ್ತು. ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯು ಸಪ್ತಾಹದ ಸಂಘಟನೆಯಲ್ಲಿ ದೊಡ್ಡ ಹೆಗಲು ನೀಡಿತ್ತು. ಕಲಾವಿದ ಹಾಗೂ ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರ್ವಹಿಸಿದರು. ಪದ್ಯಾಣ ಪ್ರಶಸ್ತಿ ಸಮಿತಿಯ ಸ್ವಸ್ತಿಕ್ಪದ್ಯಾಣ ವಂದಿಸಿದರು. ಉಜಿರೆ ಅಶೋಕ ಭಟ್ಟರ ಸಪ್ತಾಹ ಸಂಯೋಜನೆಯ ಸುಭಗತೆಯು ಸಪ್ತಾಹದಒಟ್ಟು ಯಶಸ್ಸಿನಲ್ಲಿ ಅನಾವರಣಗೊಂಡಿತ್ತು.  ಕೊನೆಯಲ್ಲಿ ‘ಗಂಗಾ ಸಾರಥ್ಯ’ ಪ್ರಸಂಗದ ತಾಳಮದ್ದಳೆ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ 
    Next Article ತುಮಕೂರಿನ ಆಕಾಶ್ ಫಾರ್ಮ್ನಲ್ಲಿ  36 ಕೃತಿಗಳ ಲೋಕಾರ್ಪಣೆ | ಜುಲೈ 13 
    roovari

    Add Comment Cancel Reply


    Related Posts

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.