ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ದಿನಾಂಕ 15-07- 2024ರಂದು ನಡೆಯಿತು.
ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು “ಆಸ್ಪತ್ರೆಗಳಲ್ಲಿ ಗ್ರಂಥಾಲಯ ಮಾಡುವ ಮೂಲಕ ರೋಗಿಗಳ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ರೋಗಿಗಳ ಮನಸ್ಥಿತಿಗೆ ಅನುಗುಣವಾಗಿ ವಿವಿಧ ರೀತಿಯ ಆರೋಗ್ಯಕ್ಕೆ, ಸಮಾಜಕ್ಕೆ ಹಾಗೂ ಪರಿಸರಕ್ಕೆ ಸಂಬಂಧಿಸಿದ ವಿವಿಧ ಬಗೆಯ ಪುಸ್ತಕಗಳು ಲಭ್ಯವಾಗಲಿ.” ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ ಇವರನ್ನು ಕ. ಸಾ. ಪ. ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಲಾಯಿತು . ಉಡುಪಿ ಕರಾವಳಿಯ ಭಾರತೀಯ ವೈದ್ಯಕೀಯ ಸಂಘ ಇದರ ಅಧ್ಯಕ್ಷೆಯಾದ ಡಾ. ರಾಜಲಕ್ಷ್ಮೀ, ಕೋಶಾಧಿಕಾರಿಯಾದ ಡಾ. ಆಮ್ನಾ ಹೆಗ್ಡೆ, ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ವ್ಯಾಸರಾಜ ತಂತ್ರಿ, ಕ. ಸಾ. ಪ. ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ಪ್ರೊ. ಶಂಕರ್ , ನಾರಾಯಣ ಮಡಿ, ಪದ್ಮಾಸಿನಿ , ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ಸಂಧ್ಯಾ ಶೆಣೈ, ಸತೀಶ್ ಕೊಡವೂರು, ಲಕ್ಷ್ಮೀ ಹರಿಶ್ಚಂದ್ರ, ಪಂಚಮಿ, ಹಫೀಜ್ ರಹೆಮಾನ್, ಸುಭೋದ್, ಶಶಿಕಾಂತ್ ಶೆಟ್ಟಿ, ಪ್ರಭಾಕರ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು. ಕ. ಸಾ. ಪ. ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಅವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಕ. ಸಾ. ಪ. ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ನಿರೂಪಿಸಿ, ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.