ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ವಿಟ್ಲ ಘಟಕದ ಸಹಭಾಗಿತ್ವದಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ಉಚಿತ ಯಕ್ಷಗಾನ ತರಗತಿಯು ದಿನಾಂಕ 11/07/2024ರಂದು ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪು ಇಲ್ಲಿ ಉದ್ಘಾಟನೆಗೊಂಡಿತು.
ಯಕ್ಷಗಾನ ಶಿಕ್ಷಕರಾದ ಶ್ರೀ ಗಣೇಶ ಕುಂದಲಕೋಡಿ ದೀಪ ಬೆಳಗಿಸುವುದರ ಮೂಲಕ ಯಕ್ಷಗಾನ ತರಗತಿಗೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ವೆಂಕಟ ರಾಘವೇಂದ್ರ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀ ಪೂವಪ್ಪ ಶೆಟ್ಟಿ ಅಳಿಕೆ, ಶ್ರೀ ಉಳ್ಳಾಲ್ತಿ ಸೇವಾ ಟ್ರಸ್ಟ್ (ರಿ.) ಕೇಪು ಇದರ ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ಪಡಿಬಾಗಿಲು, ವಿಟ್ಲ ಘಟಕದ ಪ್ರಧಾನ ಸಂಚಾಲಕರಾದ ಶ್ರೀ ಅರವಿಂದ ರೈ ಮೂರ್ಜೆಬೆಟ್ಟು, ಸಂಘಟನಾ ಕಾರ್ಯದರ್ಶಿ ಶ್ರೀ ಭಾಸ್ಕರ ಶೆಟ್ಟಿ ವೀರಕಂಭ, ಗೌರವ ಮಾರ್ಗದರ್ಶಕರಾದ ಶ್ರೀ ಹರೀಶ ಬೊಳಂತಿಮೊಗರು, ಶ್ರೀ ಉಳ್ಳಾಲ್ತಿ ಸೇವಾ ಟ್ರಸ್ಟಿನ ಕಾರ್ಯದರ್ಶಿ ಶ್ರೀ ಉಮೇಶ ಕೊರತಿಗದ್ದೆ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಲಲಿತಾ ಕೋಡಂದೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಮುರಳೀಧರ ರೈ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭಾಗೀರಥಿ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ನೀತಾ ಮಾರ್ಸೆಲಿನ್ ಕ್ರಾಸ್ತಾ ಕೆ. ವಂದಿಸಿ, ಸಹಶಿಕ್ಷಕಿ ಶ್ರೀಮತಿ ಚಿನ್ನಮ್ಮ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ಕೊನೆಯಲ್ಲಿ ಯಕ್ಷಗಾನ ಶಿಕ್ಷಕ ಗಣೇಶ ಕುಂದಲಕೋಡಿಯವರು ಸಾಂಕೇತಿಕವಾಗಿ ಯಕ್ಷಗಾನ ನಾಟ್ಯ ತರಬೇತಿಯನ್ನು ಆರಂಭಿಸಿದರು.