ಮುಲ್ಕಿ : ಶ್ರೀ ವಿನಾಯಕ ಯಕ್ಷ ಕಲಾ ತಂಡ (ರಿ.) ಕೆರೆಕಾಡು ಮುಲ್ಕಿ ಇದರ ವತಿಯಿಂದ ‘ತೈತತಕತ’ ಕಾರ್ಯಕ್ರಮವು ದಿನಾಂಕ 27-07-2024 ಮತ್ತು 28-07-2024ರಂದು ಸಂಜೆ ಗಂಟೆ 4-00ರಿಂದ ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ನಡೆಯಲಿದೆ.
ದಿನಾಂಕ 27-07-2024ರಂದು ಶ್ರೀ ಕ್ಷೇತ್ರ ಕಾರಿಂಜದ ಆಡಳಿತಾಧಿಕಾರಿ ಶ್ರೀ ಚಂದ್ರಶೇಖರ ಶೆಟ್ಟಿ ಇವರಿಂದ ಉದ್ಘಾಟನೆಗೊಳ್ಳಲಿರುವ ಈ ಕಾರ್ಯಕ್ರಮದಲ್ಲಿ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶ್ರೀ ಶ್ರೀ ವೇದಮೂರ್ತಿ ಶ್ರೀ ಕೃಷ್ಣ ತಂತ್ರಿಯವರು ಆಶೀರ್ವಚನ ನೀಡಲಿದ್ದಾರೆ. ಮುಲ್ಕಿ ಸೀಮೆಯ ಅರಸರಾದ ಶ್ರೀ ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಲಿರುವರು. ಇದೇ ಸಂದರ್ಭದಲ್ಲಿ ಮೆಸ್ಕಾಂನ ಕಿರಿಯ ಇಂಜಿನಿಯರ್ ಶ್ರೀ ಬಿ. ರಾಜೇಶ್ ಇವರಿಗೆ ‘ಶ್ರೀ ವಿನಾಯಕ ಯಕ್ಷಕಲಾ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನಡೆಯಲಿರುವ ‘ಸತ್ವ ಶೈಥಿಲ್ಯ’ ಪ್ರಸಂಗದ ಯಕ್ಷಗಾನ ಪ್ರದರ್ಶನದಲ್ಲಿ ಡಾ. ಪ್ರಖ್ಯಾತ್ ಶೆಟ್ಟಿ ಆಳಿಕೆ ಭಾಗವತರಾಗಿ, ಮಧೂರು ರಾಮಪ್ರಕಾಶ್ ಕಲ್ಲೂರಾಯ ಮತ್ತು ಯೋಗೀಶ್ ಉಳೆಪಾಡಿ ಇವರುಗಳು ಚೆಂಡೆ ಮದ್ದಳೆಯಲ್ಲಿ ಸಹಕರಿಸಲಿದ್ದಾರೆ.
ದಿನಾಂಕ 28-07-2024ರಂದು ಶ್ರೀ ವಿಶ್ವನಾಥ ದೇವಸ್ಥಾನದ ಪಾಠೇಲ್ ಶ್ರೀ ವಾಸುದೇವ ರಾವ್ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಕಟೀಲು ಅನು ವಂಶಿಕ ಅರ್ಚಕರಾದ ಶ್ರೀ ಶ್ರೀನಿವಾಸ ಆಸ್ರಣ್ಣರವರು ಆಶೀರ್ವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಕ.ವಿ. ನೌಕರರ ಸಂಘದ ಉಪಾಧ್ಯಕ್ಷರಾದ ಶ್ರೀ ಎಚ್.ಎಸ್. ಗುರುಮೂರ್ತಿ ಇವರಿಗೆ ‘ಶ್ರೀ ವಿನಾಯಕ ಯಕ್ಷಕಲಾ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನಡೆಯಲಿರುವ ‘ಪಂಚಾಕ್ಷರ ಪಾರಮ್ಯ’ ಪ್ರಸಂಗದ ಯಕ್ಷಗಾನ ಪ್ರದರ್ಶನದಲ್ಲಿ ಶ್ರೀಮತಿ ಕಾವ್ಯಶ್ರೀ ಅಜೇರು ಭಾಗವತರಾಗಿ, ಮಧೂರು ರಾಮಪ್ರಕಾಶ್ ಕಲ್ಲೂರಾಯ ಮತ್ತು ಯೋಗೀಶ್ ಉಳೆಪಾಡಿ ಇವರುಗಳು ಚೆಂಡೆ ಮದ್ದಳೆಯಲ್ಲಿ ಸಹಕರಿಸಲಿದ್ದಾರೆ.