ಮಡಿಕೇರಿ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ, ಕೋರಿಯರ್ ಮೂಲಕ ಅಥವಾ ಖುದ್ದಾಗಿ ದಿನಾಂಕ 31 ಆಗಸ್ಟ್ 2024ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ www.sahithyaacademy.karnataka.gov.inನ್ನು ಸಂಪರ್ಕಿಸಬಹುದೆಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್. ಕರಿಯಪ್ಪ ಅವರು ತಿಳಿಸಿದ್ದಾರೆ.