ನೀರ್ಚಾಲು : ಶ್ರೀ ಶಂಕರ ಶರ್ಮ ಕುಳಮರ್ವ ಇವರು ಭಾಮಿನಿ ಷಟ್ಪದಿಯಲ್ಲಿ ರಚಿಸಿದ ಮಹಾಕಾವ್ಯ ‘ಉತ್ತರಕಾಂಡ ಕಾವ್ಯಧಾರ’ ಗ್ರಂಥದ ಲೋಕಾರ್ಪಣಾ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು ಇದರ ಸಹಯೋಗದೊಂದಿಗೆ ದಿನಾಂಕ 18 ಆಗಸ್ಟ್ 2024ರ ಭಾನುವಾರ ಅಪರಾಹ್ನ 2-30 ಗಂಟೆಗೆ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಉನ್ನತ ಪ್ರೌಢಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಲಾ ಪ್ರಬಂಧಕರಾದ ಶ್ರೀ ಜಯದೇವ ಖಂಡಿಗೆ ಇವರು ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಹಾಯಕ ಶಿಕ್ಷಕರಾದ ಶ್ರೀಮತಿ ಬಿ. ಶೈಲಜಾ ಇವರು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು ಇದರ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಇವರು ಮುಖ್ಯ ಅತಿಥಿಗಳಾಗಿದ್ದು, ವಿಶ್ರಾಂತ ಪ್ರಾಂಶುಪಾಲರಾದ ಡಾ. ಪಾದೇಕಲ್ಲು ವಿಷ್ಣು ಭಟ್ಟ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದು, ವಿಶ್ರಾಂತ ಪ್ರಾಂಶುಪಾಲರಾದ ಡಾ. ಬೇ.ಸೀ. ಗೋಪಾಲಕೃಷ್ಣ ಭಟ್ ಇವರು ಕೃತಿ ಅವಲೋಕನ ಮಾಡಲಿರುವರು. ವಿಶ್ರಾಂತ ಪ್ರಾಧ್ಯಾಪಕರು ಡಾ. ಹರಿಕೃಷ್ಣ ಭರಣ್ಯ ಇವರು ಶುಭಾಶಂಸನೆಗೈಯಲಿದ್ದಾರೆ. ಸಾಹಿತ್ಯಾಭಿಮಾನಿಗಳಾದ ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕಾಗಿ ಕುಳಮರ್ವ ಮನೆಯವರು ವಿನಂತಿಸಿದ್ದಾರೆ.