ಹಂಗಾರಕಟ್ಟೆ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇವರ ಸಹಯೋಗದೊಂದಿಗೆ ಎರಡು ದಿನಗಳ ‘ಯಕ್ಷಗಾನ ಬಣ್ಣಗಾರಿಕೆ ಮತ್ತು ವೇಷಗಾರಿಕೆ ಕಾರ್ಯಾಗಾರ’ವನ್ನು ದಿನಾಂಕ 14-09-2024 ಮತ್ತು 15-09-2024ರಂದು ಬೆಳಗ್ಗೆ 10-00 ಗಂಟೆಗೆ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ದಿನಾಂಕ 14 ಸೆಪ್ಟೆಂಬರ್ 2024ರಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಮಾಹೆಯ ಸಹ ಕುಲಪತಿಗಳಾದ ಡಾ. ಹೆಚ್.ಎಸ್. ಬಲ್ಲಾಳ್ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ಶ್ರೀ ಗಣೇಶ ಚೇರ್ಕಾಡಿ, ಶ್ರೀ ಗಣೇಶ ಜನ್ನಾಡಿ, ಶ್ರೀ ಮಿಥುನ್ ಬ್ರಹ್ಮಾವರ, ಶ್ರೀ ವೈಕುಂಠ ಹೇರ್ಳೆ, ಶ್ರೀ ಅಶೋಕ್ ಆಚಾರ್, ಶ್ರೀ ಕೂರಾಡಿ ರಾಮ ಬಾಯರಿ, ಶ್ರೀಕಾಂತ ವಡ್ಡರ್ಸ್, ಶ್ರೀ ಸೀತಾರಾಮ ಸೋಮಯಾಜಿ ಶ್ರೀ ವಿಭವನ್ ಗುಂಡ್ಕಿ ಇವರುಗಳು ಕಾರ್ಯಾಗಾರದಲ್ಲಿ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆ ಮತ್ತು ವೇಷಗಾರಿಕೆಯನ್ನು ಕಲಿಸಿಕೊಡುವ ಸಂಪನ್ಮೂಲ ವ್ಯಕ್ತಿಗಳು. ದಿನಾಂಕ 15 ಸೆಪ್ಟೆಂಬರ್ 2024ರಂದು ಅಪರಾಹ್ನ 12-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.