ಮಂಗಳೂರು : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯದ ವತಿಯಿಂದ ‘ತ್ರಿದಶ ನಾಟ್ಯ ಕಲೋತ್ಸವ’ ಕಾರ್ಯಕ್ರಮವನ್ನು ದಿನಾಂಕ 14 ಸೆಪ್ಟೆಂಬರ್ 2024ರಂದು ಸಂಜೆ 5-00 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಮತ್ತು ಚೆನ್ನೈಯ ಡಾ. ಅಪೂರ್ವ ಜಯರಾಮನ್ ಇವರಿಂದ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಮಂಗಳೂರಿನ ಸನಾತನ ನಾಟ್ಯಾಲಯದ ನೃತ್ಯಗುರು ವಿದುಷಿ ಶ್ರೀಲತಾ ನಾಗರಾಜ್ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸನಾತನ ನಾಟ್ಯಾಲಯದ ಹಿರಿಯ ನೃತ್ಯಗುರು ವಿದುಷಿ ಶಾರದಾಮಣಿ ಶೇಖರ್ ಇವರು ದೀಪ ಪ್ರಜ್ವಲನ ಮಾಡಿಲಿದ್ದು, ಕಲಾ ವಿಮರ್ಶಕಿ ವಿದುಷಿ ಪ್ರತಿಭಾ ಎಂ.ಎಲ್. ಸಾಮಗ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಅತಿಥಿಯಾಗಿ ಭಾಗವಹಿಸಲಿದ್ದು, ಸುರತ್ಕಲ್ ಗೋವಿಂದದಾಸ ಕಾಲೇಜು ನಿವೃತ್ತ ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ. ಅಧ್ಯಕ್ಷತೆ ವಹಿಸುವರು.
‘ತ್ರಿದಶ ನಾಟ್ಯ ಕಲೋತ್ಸವ’ ಪ್ರಯುಕ್ತ ದಿನಾಂಕ 15 ಸೆಪ್ಟೆಂಬರ್ 2024ರಂದು ಬೆಳಿಗ್ಗೆ 9-30 ಗಂಟೆಗೆ ಸುರತ್ಕಲ್ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಅಪೂರ್ವ ಜಯರಾಮನ್ ಇವರು ಭರತನಾಟ್ಯ ಕಾರ್ಯಾಗಾರವನ್ನು ನಡೆಸಿಕೊಡಲಿರುವರು.