ಮಂಗಳೂರು : ಉಡುಪಿ, ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಇದರ ವತಿಯಿಂದ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ಸಹಯೋಗದಲ್ಲಿ 31ನೇ ವರ್ಷದ ‘ಮಕ್ಕಳ ಧ್ವನಿ 2024’ – ಮಕ್ಕಳ ಸಾಹಿತ್ಯಿಕ, ಸಾಂಸ್ಕೃತಿಕ ಸಮ್ಮೇಳನವು ದಿನಾಂಕ 14 ಸೆಪ್ಟೆಂಬರ್ 2024ರಂದು ಸುರತ್ಕಲ್ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ.
ಈ ಸಮ್ಮೇಳನದ ಸಮ್ಮೇಳನಾಧ್ಯಕ್ಷತೆಯನ್ನು ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಇವರು ವಹಿಸಲಿದ್ದು, ಮಂಗಳೂರಿನ ವಾಗೀಶ್ವರೀ ಪ್ರಕಾಶನದ ಶ್ರೀ ವಾಗೀಶ್ವರೀ ಶಿವರಾಂ ಇವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಹಿಂದು ವಿದ್ಯಾದಾಯಿನೀ ಸಂಘ ಸುರತ್ಕಲ್‌ನ ಅಧ್ಯಕ್ಷ ಜಯಚಂದ್ರ ಹತ್ವಾರ್, ಧರ್ಮದರ್ಶಿ ಹರಿಕೃಷ್ಣ ಪುನರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಈ ಕಾರ್ಯಕ್ರಮದಲ್ಲಿ ಅಭಿನಯ ಗೀತೆಗೋಷ್ಠಿ, ವಿವೇಕ ಬಾಲಕಿಯರ ಪ್ರೌಢ ಶಾಲೆಯ ಕುಮಾರಿ ಮಾನಸ ಜಿ. ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ಕುಮಾರಿ ತನ್ವಿತಾ ವಿ. ಇವರ ಅಧ್ಯಕ್ಷತೆಯಲ್ಲಿ ಕಥಾಗೋಷ್ಠಿ ಪ್ರಸ್ತುತಗೊಳ್ಳಲಿದೆ. ಅಪರಾಹ್ನ 3-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.