ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ವತಿಯಿಂದ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪ್ರದರ್ಶನ ಫಲಕಗಳ ಅನಾವರಣ, ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯರವರ ಜನ್ಮದಿನಾಚರಣೆ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 15 ಸೆಪ್ಟೆಂಬರ್ 2024ರಂದು ಸಂಜೆ 5-00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಭಾ.ಆ.ಸೇ. ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಪುಟ್ಟಣ್ಣಯ್ಯರವರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದು, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರಮೇಶಚಂದ್ರ ಲಹೋಟಿಯವರು ಮುಖ್ಯ ಅತಿಥಿಗಳಾಗಿ ನಮ್ಮೊಂದಿಗಿರುತ್ತಾರೆ. ಶಾಸನ ತಜ್ಞರು ಹಾಗೂ ದತ್ತಿ ದಾನಿಗಳಾದ ಡಾ. ಎಂ.ಜಿ. ನಾಗರಾಜ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಇತಿಹಾಸಕಾರರು ಮತ್ತು ಕಾದಂಬರಿಕಾರರಾದ ಡಾ. ಗಜಾನನ ಶರ್ಮರವರು ಸರ್ ಎಂ. ವಿಶ್ವೇಶ್ವರಯ್ಯರವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. 2024ನೆಯ ಸಾಲಿನ ʻಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ದತ್ತಿ ಪ್ರಶಸ್ತಿʼಯನ್ನು ಶ್ರೀ ಎಂ.ಎನ್. ಸತೀಶ್ ಕುಮಾರ್ ಇವರಿಗೆ ಹಾಗೂ ʻಶ್ರೀಮತಿ ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿʼಯನ್ನು ಶ್ರೀ ದಯಾನಂದ ಮೂರ್ತಿ ಇವರಿಗೆ ಪ್ರದಾನ ಮಾಡಲಾಗುವುದು.