ಬೆಂಗಳೂರು : ರಂಗಮಂಡಲ ಬೆಂಗಳೂರು ಮತ್ತು ಭಾಗವತರು ಸಾಂಸ್ಕೃತಿಕ ಸಂಘಟನೆ ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಕಾರ್ಯಕ್ರಮದ ತೃತೀಯ ಕವಿಗೋಷ್ಠಿ ಜನಸಾಮಾನ್ಯರ ದನಿಯಾಗಲಿ ಕಾವ್ಯ ರಾಜಧಾನಿ ಬೆಂಗಳೂರಿನಿಂದ ತೊಗರಿನಾಡು ಕಲಬುರಗಿ ಕಡೆಗೆ ‘ಕಾವ್ಯದೀವಟಿಗೆಯ ಪಯಣ’ವು ದಿನಾಂಕ 28 ಸೆಪ್ಟೆಂಬರ್ 2024ರಂದು ಇಳಿ ಮಧ್ಯಾಹ್ನ 3-30 ಗಂಟೆಗೆ ಬೆಂಗಳೂರಿನ ಜಯಚಾಮರಾಜೇಂದ್ರ ರಸ್ತೆ, ಕನ್ನಡ ಭವನ ಕರ್ನಾಟಕ ನಾಟಕ ಅಕಾಡೆಮಿ ಚಾವಡಿಯಲ್ಲಿ ನಡೆಯಲಿದೆ.
ಬೆಂಗಳೂರು ಗೋಷ್ಠಿಯ ಅಧ್ಯಕ್ಷತೆಯನ್ನು ಕವಿ ಲಕ್ಷ್ಮೀಪತಿ ಕೋಲಾರ ವಹಿಸಲಿದ್ದು, ಕವಿ ಡಾ. ಬಂಜಗೆರೆ ಜಯಪ್ರಕಾಶ್ ಉದ್ಘಾಟನೆಯನ್ನು ಮಾಡಲಿದ್ದಾರೆ. ನಾಡಿನ ಖ್ಯಾತ ಕವಿಗಳು ಕವಿತಾ ವಾಚನ ಮತ್ತು ಗೀತ ಗಾಯನ ಕಾರ್ಯಕ್ರಮ ನೀಡಲಿದ್ದಾರೆ. ಬೆಂಗಳೂರು ಹಾಗೂ ಕಲಬುರಗಿಯ ನಾವಿಕರಾಗಿ ಕೆ. ರೇವಣ್ಣ ಹಾಗೂ ಮಹಿಪಾಲ ರೆಡ್ಡಿ ಮುನ್ನೂರು ಅವರು ಯಾನವನ್ನು ಮುನ್ನೆಡೆಸಲಿದ್ದಾರೆ.