ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ಪ್ರತೀ ವರ್ಷ ಸಂಸ್ಥೆ ನಡೆಸಿಕೊಂಡು ಬರುತ್ತಿರುವ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದು ‘ಆಳ್ವಾಸ್ ವಿರಾಸತ್-2024’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು.
ವಿದ್ಯಾಗಿರಿಯ ಆವರಣದಲ್ಲಿ ನಡೆಯುವ ವಿರಾಸತ್ 2024ರ ಡಿಸೆಂಬರ್ 10 ಮಂಗಳವಾರದಂದು ಪ್ರಾರಂಭವಾಗಿ ಭಾನುವಾರ ಡಿಸೆಂಬರ್ 15ರಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 05 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ ದಿನ 05 ದಶಂಬರ್ 2024ನೇ ಭಾನುವಾರವನ್ನು ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗುತ್ತಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ವು ನಡೆಸುವ ಆಳ್ವಾಸ್ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್-2024’ ಸಮಾರಂಭಕ್ಕೆ ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ ಆಳ್ವ ತಿಳಿಸಿದರು.
Subscribe to Updates
Get the latest creative news from FooBar about art, design and business.
Previous Articleರಂಗ ಶಂಕರ 20 ವರ್ಷಗಳ ರಂಗ ಸಂಭ್ರಮದಲ್ಲಿ ನಾಟಕ ಪ್ರದರ್ಶನ
Next Article ಖ್ಯಾತ ಚಿತ್ರಕಲಾವಿದ ವಿಜಯ ಗಂಗಪ್ಪ ಸಿಂಧೂರ ನಿಧನ
Related Posts
Comments are closed.